FactCheck: ಹನುಮಂತ ರಾಜಕೀಯಕ್ಕೆ ಎಂಟ್ರಿ, ಬಿಸಿ ಪಾಟೀಲ್ ಕಡೆಯಿಂದ ದೊಡ್ಡ ಆಫರ್
Feb 13, 2025, 19:32 IST
|

ಬಿಗ್ ಬಾಸ್ ಸೀಸನ್ 11ಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ 30 ದಿನಗಳ ಆಸುಪಾಸಿನಲ್ಲಿ ಬಂದ ಹಳ್ಳಿ ಹೈದ ಹನುಮಂತ ಅವರು ಕೆಲವೇ ದಿನಗಳಲ್ಲಿ ಇಡೀ ರಾಜ್ಯದ ಜನತೆಯ ಮನಸ್ಸನ್ನು ಗೆದ್ದಿದ್ದಾರೆ. ಇದರಿಂದ ಪ್ರತಿವಾರ ಹನುಮಂತು ಅವರು ಭಾರೀ ವೋಟ್‌ಗಳನ್ನು ಪಡೆದು ಸೇಫ್ ಆಗುತ್ತಾ ಫಿನಾಲೆಗೂ ಎಂಟ್ರಿ ಕೊಟ್ಟಿದ್ದರು. ಹನುಮಂತನ ನ್ಯಾಯಪರ ಆಟ ಮತ್ತು ಸಹ ಸ್ಪರ್ಧಿಗಳು ಮಾಡುತ್ತಿದ್ದ ಕುಂತತ್ರಗಳನ್ನು ನೋಡುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಶೋ ವೀಕ್ಷಕರು ಫಿನಾಲೆ ವಾರದಲ್ಲಿ ಹನುಮಂತನಿಗೆ 5.3 ಕೋಟಿ ವೋಟ್ ಮಾಡುವ ಮೂಕ ಬಿಗ್ ಬಾಸ್ ಟ್ರೋಪಿ ವಿಜೇತನಾಗುವುದಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಹನುಮಂತಗೆ ಸ್ಟಾರ್ ಪಟ್ಟ ಸಿಕ್ಕಿದೆ.
ಇದರ ಬೆನ್ನಲ್ಲಿಯೇ ಗಾಯಕ ಹನುಮಂತ ಅವರು ತಮ್ಮ ಸ್ವಗ್ರಾಮಕ್ಕೆ ತೆರಳಿ ಟ್ರೋಫಿಯನ್ನು ತಮ್ಮ ಆರಾಧ್ಯ ದೈವ ಹನುಮಂತ ದೇವರ ಪಾದಕ್ಕೆ ಅರ್ಪಿಸಿ ಪೂಜೆ ನೆರವೇರಿಸಿ ಬಂದಿದ್ದರು. ಇದರ ನಂತರ ಅವರು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಮತ್ತೊಂದು ರಿಯಾಲಿಟಿ ಶೋ ಬಾಯ್ಸ್ ವರ್ಸಸ್ ಗರ್ಲ್ಸ್ ಶೋನಲ್ಲಿ ಭಾಗವಹಿಸಿದ್ದಾರೆ. ಇದೀಗ ಹಳ್ಳಿಹೈದ ಹನುಮಂತು ಟಿವಿ ವಾಹಿನಿಗಳ ಟಿಆರ್‌ಪಿ ಕಿಂಗ್ ಆಗಿ ಪರಿವರ್ತನೆ ಆಗುತ್ತಿದ್ದಾನೆ.
ತನಗೆ ಎಷ್ಟೇ ಗೌರವ ಸಿಕ್ಕಿದರೂ ತಾನು ಅತ್ಯಂತ ಸರಳವಾಗಿಯೇ ನಡೆದುಕೊಳ್ಳುವುದರಿಂದ ಆತನ ಎಲ್ಲ ಕಾರ್ಯಕ್ರಮ ವೀಕ್ಷಣೆ ಮಾಡುವುದಕ್ಕೆ ಜನರು ಹೆಚ್ಚಿನ ಆದ್ಯತೆ ನೀಡುತ್ತಾರೆ.ಕಳೆದ 4 ದಿನಗಳ ದಿನಗಳ ಹಿಂದೆ ಹಾವೇರಿ ಜಿಲ್ಲೆಯ ರಾಜಕೀಯ ನಾಯಕ ಹಾಗೂ ಮಾಜಿ ಕೃಷಿ ಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರು ಕರೆ ಮಾಡಿ, ಕಂಗ್ರಾಜುಲೇಷನ್ಸ್ ಹನುಮಂತು. ಹಾವೇರಿ ಘನತೆ ಗೌರವವನ್ನು ಎತ್ತಿ ಹಿಡಿದಿದ್ದೀಯ. ನಾನು ನಿಮ್ಮನ್ನು ನೋಡ್ತಿದ್ದೇನೆ ತುಂಬಾ ಚೆನ್ನಾಗಿ ಆಟವಾಡಿದ್ದೀರಿ ಎಂದು ಹೇಳಿದ್ದಾರೆ.
ಈ ಆಡಿಯೋವನ್ನು ಸ್ವತಃ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರೇ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ತಮ್ಮ ಪೋಸ್ಟ್‌ಗೆ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 11ರ ವಿಜೇತರಾದ ನಮ್ಮ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಶ್ರೀ ಹನುಮಂತ ಲಮಾಣಿ ಅವರಿಗೆ ಇಂದು ದೂರವಾಣಿ ಕರೆಯ ಮೂಲಕ ಮಾತನಾಡಿ, ಶುಭಾಶಯ ತಿಳಿಸಿದ ಸಂದರ್ಭ ಎಂದು ಬರೆದುಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025