ಖ್ಯಾತ ನಟ ಶರತ್ ಬಾಬು ಆರೋಗ್ಯ ಪರಿಸ್ಥಿತಿ ಗಂಭೀರ, ಶಾಕಿಂಗ್ ಹೇಳಿಕೆ ಕೊಟ್ಟ ವೈದ್ಯರು

 | 
ಕಿಿ

 ನಟ ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಶರತ್ ಬಾಬು ಸೆಪ್ಸಿಸ್ಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಅವರ ಮೂತ್ರಪಿಂಡ, ಶ್ವಾಸಕೋಶ, ಯಕೃತ್ತು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿರುವ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರು ಅಪ್ಡೇಟ್ ನೀಡಿದ್ದಾರೆ. ಶರತ್ ಬಾಬು ಅವರಿಗೆ ಉಸಿರಾಡಲು ಕೂಡ ಕಷ್ಟವಾಗಿದ್ದು, ವೆಂಟಿಲೇಟರ್​ನಲ್ಲಿ ಇಡಲಾಗಿದೆ. ಕುಟುಂಬಸ್ಥರು ಹಾಗೂ ಅಭಿಮಾನಿಗಳು ಆತಂಕ ಹೊರ ಹಾಕಿದ್ದಾರೆ.ಹಿರಿಯ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂಬ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸೌತ್ ಸಿನಿಮಾ ಇಂಡಸ್ಟ್ರಿಯ ಜನಪ್ರಿಯ ನಟ ಶರತ್ ಬಾಬು ಹೈದರಾಬಾದ್ನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಮೊದಲು ನಟ ಶರತ್ ಬಾಬು ದಿಢೀರ್ ಅಸ್ವಸ್ಥರಾಗಿದ್ದ ಹಿನ್ನೆಲೆ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ನಟನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಬೆಂಗಳೂರಿನಿಂದ ಹೈದರಾಬಾದ್​ನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಶರತ್ ಬಾಬು ಅವರು 31 ಜುಲೈ 1951 ರಂದು ಶ್ರೀಕಾಕುಳಂ ಜಿಲ್ಲೆಯ ಅಮುದಲಾದಲ್ಲಿ ಜನಿಸಿದರು. ತಂದೆ ಉದ್ಯಮಿ. ಶರತ್ ಬಾಬುಗೆ ಪೊಲೀಸ್ ಆಗಬೇಕು ಎನ್ನುವ  ಆಸೆ ಇತ್ತಂತೆ. ಕಣ್ಣಿನ ಸಮಸ್ಯೆಯಿಂದ ಪೊಲೀಸ್ ಆಗಲು ಸಾಧ್ಯವಾಗಲಿಲ್ಲ. ಆದರೆ ಹಲವು ಸಿನಿಮಾಗಳಲ್ಲಿ ಪೊಲೀಸ್ ಅಧಿಕಾರಿಯಾಗಿ  ಶರತ್ ಬಾಬು ಕಾಣಿಸಿಕೊಂಡಿದ್ದರು.


ರಾಮರಾಜ್ಯಂ ತೆಲುಗು ಚಿತ್ರದ  ಮೂಲಕ ಸಿನಿಪಯಣ ಆರಂಭಿಸಿದರು. ಆದ್ರೆ ರಾಮರಾಜ್ಯಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಲಿಲ್ಲ. ಶರತ್ ಬಾಬು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಾಯಕನಾಗಿ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.ಸುಮಾರು 8 ನಂದಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಮೂಲ ಹೆಸರು ಸತ್ಯಂ ಬಾಬು ದೀಕ್ಷಿತಲು. ನಾಯಕನಾಗಿ ಮತ್ತು ಪೋಷಕ ನಟನಾಗಿ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು.ಶರತ್ ಬಾಬು ರಮಾಪ್ರಭಾ ಮತ್ತು ಸ್ನೇಹಾ ನಂಬಿಯಾರ್ ಅವರನ್ನು ವಿವಾಹವಾಗಿದ್ರೂ ಇಬ್ಬರಿಗೂ ವಿಚ್ಛೇದನ ನೀಡಿದ್ದಾರೆ. ಪ್ರಸ್ತುತ  ಒಂಟಿಯಾಗಿ ಚೆನ್ನೈನಲ್ಲಿ ನೆಲೆಸಿದ್ದರು.

(ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.