ನಾಳೆ ಬೆಳಗ್ಗೆಯಿಂದ ಜನ ಸಾಮಾನ್ಯರು ಕಣ್ಣೀರು ಹಾಕುವ ಪರಿಸ್ಥಿತಿ, ಊಟ ತಿಂಡಿಗೆ ಪರದಾಟ

 | 
Hz

ನಾಳೆಯಿಂದ ಯಾವುದೇ ಸರ್ಕಾರಿ ಕೆಲಸವಿದ್ದರೂ ಮುಂದೂಡಿ ಬಿಡಿ .ಏಕೆಂದರೆ ಯಾವ ಕೆಲಸವೂ ಕೂಡ ಆಗೋದಿಲ್ಲ. ಹೌದು ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರ್ಕಾರಿ ನೌಕರರು ನಂಬುವ ಸ್ಥಿತಿಯಲ್ಲಿ ಇಲ್ಲ. ಅಧಿಕೃತ ಆದೇಶಕ್ಕೆ ಪಟ್ಟು ಹಿಡಿದಿರುವ ರಾಜ್ಯ ಸರ್ಕಾರಿ ನೌಕರರ ಸಂಘ ನಿಗದಿಯಂತೆ ಮಾರ್ಚ್ ಒಂದರಿಂದ ಮುಷ್ಕರ ಆರಂಭಿಸಲು ಮುಂದಾಗಿದೆ.Hd

ಇಂದು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ನಿಗಮ,ಪ್ರಾಧಿಕಾರ ಸೇರಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲು ಸೂಚನೆ ಕೊಟ್ಟಿದ್ದೇವೆ. ಈಗಾಗಲೇ ಒಂಭತ್ತು ತಿಂಗಳು ತಡವಾಗಿದೆ. ನಮ್ಮ ಬೇಡಿಕೆ ಈಡೇರಲೇ ಬೇಕು.ಅಲ್ಲಿಯವರೆಗೂ ವಿರಮಿಸಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸ್ಪಷ್ಟಪಡಿಸಿದೆ. ಲಿಖಿತ ವಾಗ್ದಾನ‌ ನೀಡುವಂತೆ ನೌಕರರು ಪಟ್ಟು ಹಿಡಿದಿದ್ದು, ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮುಷ್ಕರಕ್ಕೆ‌ ಮುಂದಾಗಿರುವ ಸರ್ಕಾರಿ ನೌಕರರನ್ನು ಕರೆಸಿ ಸರ್ಕಾರ ಮಾತುಕತೆ ನಡೆಸಲಿದೆ ಎಂದು ಹೇಳಲಾಗಿತ್ತು. ಇದುವರೆಗೆ ಸರ್ಕಾರದ ಕಡೆಯಿಂದ ಸರ್ಕಾರಿ ನೌಕರರ ಸಂಘಕ್ಕೆ ಮಾತುಕತೆಗೆ ಬರುವಂತೆ ಬುಲಾವ್ ಬಂದಿಲ್ಲ. Hs

ಸೋಮವಾರ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರಿಂದ ಇಂದು ಮಾತುಕತೆ ನಡೆಸುವ ವಿಶ್ವಾಸದಲ್ಲಿ ಸರ್ಕಾರಿ ನೌಕರರು ಇದ್ದಾರೆ. ಈವರೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಕಾರಣ ಸರ್ಕಾರಿ ನೌಕರರು ಮುಷ್ಕರಕ್ಕೆ ಅಣಿಯಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರಕ್ಕಾಗಿ ಕೆಲ‌ ಮಾರ್ಗಸೂಚಿಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರುಗಳು ತಮ್ಮ ಅಧೀನದಲ್ಲಿ ಬರುವ ಉಪಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಯುಕ್ತಿಕವಾಗಿ ಆಹ್ವಾನ ನೀಡುವ ಮೂಲಕ ಸಭೆಗಳನ್ನು ಏರ್ಪಡಿಸಿ ಮುಕ್ತವಾಗಿ ಚರ್ಚಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದೆ. Hd

ಇದರಿಂದ ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವುಂಟಾಗಲಿದೆ. ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಗ್ರಾಮ ಪಂಚಾಯತಿ ಸಿಬ್ಭಂದಿ, ನಗರ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರ ಕಾರ್ಮಿಕರು, ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ಬೆಂಬಲ ಸೂಚಿಸಿದ್ದಾರೆ. ಗ್ರಾಮ ಲೆಕ್ಕಿಗರಿಂದ ಹೆಚ್ಚುವರಿ ಜಿಲ್ಲಾಧಿಕಾರಿಯವರೆಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರುಹಾಜರಾಗುತ್ತಿದ್ದು, ಬಹುತೇಕ ಸೇವೆಗಳು ವ್ಯತ್ಯಯವಾಗಲಿದೆ. ಕರ್ನಾಟಕ ಸಚಿವಾಲಯ ನೌಕರರ ಸಂಘ, ಅರಣ್ಯ ಇಲಾಖೆ ನೌಕರರು, ವಿವಿಧ ನಿಗಮ ಮಂಡಳಿಗಳ ನೌಕರರು ಭಾಗವಹಿಸುತ್ತಿದ್ದು, ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿನ ವಾಹನಗಳ ನೋಂದಣಿ, ಪರವಾನಗಿ ವಿತರಣೆ ಕಾರ್ಯಗಳು ಸ್ಥಗಿತವಾಗಲಿವೆ.  Hh

ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆ ಸೇವೆಗಳು ದೊರಕುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಲಿದ್ದಾರೆ. ಬಸ್ ಗಳ ಸಂಚಾರ ಎಂದಿನಂತಿರುತ್ತದೆ. ವಿವಿಗಳಲ್ಲಿ ತರಗತಿಗಳು ಎಂದಿನಂತೆ ನಡೆಯಲಿವೆ. ಕಸ ಸಂಗ್ರಹದಲ್ಲಿ ವ್ಯತ್ಯಯ, ಶಾಲಾ-ಕಾಲೇಜುಗಳು ಬಂದ್, ಹೊರ ರೋಗಿಗಳ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅಲಭ್ಯ, ಆಸ್ತಿ ನೋಂದಣಿ ಸ್ಥಗಿತ, ತಹಶೀಲ್ದಾರ್ ಕಚೇರಿ ಬಂದ್, ಅಹವಾಲು ಸಲ್ಲಿಕೆ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ.Vvv

ಮುಷ್ಕರ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ, ನೌಕರರು ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಧರಣಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವಂತಿಲ್ಲ ಎಂದು ನೌಕರರ ಸಂಘ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಒಟ್ಟಿನಲ್ಲಿ ಹೊಸ ಪಿಂಚಣಿ ನೀತಿ(NPS) ರದ್ಧತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಿರುವುದು ಖಚಿತವಾಗಿದೆ.

(ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.