BPL ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್, ಏನು ಯಾಕೆ ಗೊತ್ತಾ

 | 
Hdhd

ಬಿಪಿಎಲ್ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ ವ್ಯವಸ್ಥೆ ಮಾಡಲಾಗಿದೆ. ಇದೀಗ, ಪಡಿತರ ಚೀಟಿ ಹೊಂದಿರುವವರಿಗೆ ಗುಡ್ ನ್ಯೂಸ್ ಹೊರ ಬೀಳುವ ಸಾಧ್ಯತೆ ದಟ್ಟವಾಗಿತ್ತು. 

ಇದೀಗ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವ ನಿಟ್ಟಿನಲ್ಲಿ ಕೆಲವರು ನಕಲಿ ದಾಖಲೆಗಳನ್ನು ನೀಡಿ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ರೀತಿ ಮೋಸ ಮಾಡುವವರ ಪತ್ತೆಗಾಗಿ ಶೀಘ್ರದಲ್ಲೇ ಆಹಾರ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು, ಅಂಥವರ ಕಾರ್ಡನ್ನು ರದ್ದು ಮಾಡಲಾಗುತ್ತದೆ. 

ಇದರ ನಡುವೆಯೇ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಬಿಪಿಎಲ್ ಕಾರ್ಡ್ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡುವ ಸುಳಿವು ನೀಡಿದ್ದು, ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅನುವು ಮಾಡಿಕೊಡಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14 ರವರೆಗೆ ಕಾಲಾವಕಾಶ ನೀಡಲಾಗಿದೆ. ಈಗಾಗಲೇ ಸಲ್ಲಿಕೆಯಾಗಿರುವ 3 ಲಕ್ಷ ಎಪಿಎಲ್ ಕಾರ್ಡ್ ಅರ್ಜಿಗಳಲ್ಲಿ ಶೇ 75ರ ದೃಢೀಕರಣ ಪೂರ್ಣಗೊಂಡಿದ್ದು, ಸದ್ಯದಲ್ಲೆ ಈ ಕಾರ್ಡ್ಗಳನ್ನು ವಿತರಣೆ ಮಾಡುವ ಸಂಭವವಿದೆ. 

ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಕಾರ್ಡ್ಗಳನ್ನು ವಿತರಣೆ ಮಾಡಿದ್ದಲ್ಲಿ, ಹೊಸ ಕಾರ್ಡ್ಗಳಿಗೆ ಅವಕಾಶ ನೀಡಲು ಸಾಧ್ಯವಾಗುತ್ತದೆ. ಇದೀಗ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿದ್ದರಿಂದ ಜನ ಸಂತೋಷಪಟ್ಟಿದ್ದಾರೆ. ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.