ಮದುವೆಯಾಗಿ ಒಂದು ದಿನದ ನಂತರ ಮನೆಯಿಂದ ಹೊರಬಂದ ಧನಂಜಯ್ ದಂಪತಿಗಳ ಸಿಹಿಸುದ್ದಿ
Feb 19, 2025, 09:07 IST
|

ಚಂದನವನದ ಚೆಂದದ ನಟ ಡಾಲಿ ಧನಂಜಯ ಅವರು ಫೆ.16ರಂದು ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಆಗಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ತಾರೆಯರು, ರಾಜಕೀಯ ಮುಖಂಡರು, ಸಾವಿರಾರು ಅಭಿಮಾನಿಗಳು ಈ ಮದುವೆಗೆ ಆಗಮಿಸಿ, ಧನಂಜಯ ಮತ್ತು ಅವರ ಪತ್ನಿ ಡಾ. ಧನ್ಯತಾಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದೀಗ ಮದುವೆ ಮುಗಿದು ಒಂದು ದಿನದ ನಂತರ ಮೊದಲ ಬಾರಿಗೆ ಒಂದು ಪೋಸ್ಟ್ ಅನ್ನು ಧನಂಜಯ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ನಮಸ್ಕಾರ, ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದು ಹೇಳಿದ್ದಾರೆ.
ಇನ್ನು ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆಯ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದು ಧನಂಜಯ ಬರೆದುಕೊಂಡಿದ್ದಾರೆ.
ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು, ತಾರೆಯರು, ಕಾರ್ಮಿಕರು, ಹಾಗೂ ನಮಗಾಗಿ ಕೆಲಸಕ್ಕೆ ನಿಂತ ಪ್ರೊಡಕ್ಷನ್ ಮ್ಯಾನೇಜರ್ಸ್ ತಂಡಕ್ಕೆ, ಒಟ್ಟಾಗಿ ನನ್ನ ಚಿತ್ರರಂಗದ ಕುಟುಂಬಕ್ಕೆ ಹೃಯಪೂರ್ವಕ ನಮನಗಳು. ಮದುವೆಯ ಮೆರಗು ಹೆಚ್ಚಿಸಿದ ಪ್ರೀತಿಯ ಅಭಿಮಾನಿಗಳಿಗೆ ವಿಶೇಷ ಧನ್ಯವಾದಗಳು.. ತಾಯಿ ಚಾಮುಂಡೇಶ್ವರಿಗೆ ಭಕ್ತಿಪೂರ್ವಕ ನಮನಗಳು ಎಂದು ಡಾಲಿ ಧನಂಜಯ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.