ಹಾಲಶ್ರೀ ಸ್ವಾಮೀಜಿ ಅರೆ ಸ್ಟ್, ಬಿದ್ದುಬಿದ್ದು ನೆಗಾಡಿದ ಚೈತ್ರಾ ಕುಂದಾಪುರ ವಿಡಿಯೋ ವೈರಲ್

 | 
Hg

ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆ ಸಿಕ್ಕಿದ್ದಿದ್ದಾನೆ. ಒಡಿಶಾ ಪೊಲೀಸರ ಸಹಾಯದಿಂದ ಸಿಸಿಬಿ ಪೊಲೀಸರು ಹಾಲಶ್ರೀಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ. ಇನ್ನು ಇವರು ಅರೆಸ್ಟ್ ಆಗುತ್ತಿದ್ದಂತೆ ಮುಸಿ ಮುಸಿ ನಕ್ಕ ಚೈತ್ರಾ ಕುಂದಾಪುರ ಮತ್ಯಾವುದೋ ಗುಟ್ಟನ್ನು ಮುಚ್ಚಿಟ್ಟ ಹಾಗಿದೆ. ಕಳೆದ ಕೆಲ ದಿನಗಳ ಹಿಂದೆ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸ್ತೀನಿ ಎಂದು ಚೈತ್ರಾ ಕುಂದಾಪುರ, ಗೋವಿಂದ್‌ ಬಾಬು ಎನ್ನುವರಿಗೆ 5 ಕೋಟಿ ನಾಮ ಹಾಕಿದ್ದಳು. ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. 

ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್‌ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ MLA ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಎನ್ನುವ ಕುತೂಹಲ ಮನೆ ಮಾಡಿತ್ತು. ಇದೇ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ಸ್ಥಳ ಸೇರಿದ್ದಾರೆ. 

ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ದೊಡ್ಡವರ ಹೆಸರು ಬಾಯಿಬಿಡುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಸ್ವಾಮೀಜಿಯ ಬಂಧನ ಭಾರೀ ಕುತೂಹಲ ಮೂಡಿಸಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ