60 ವರ್ಷದ ವೃದ್ಧೆಯನ್ನು ಬಿಡದೆ ಹೊತ್ತುಕೊಂಡು ಹೋಗಿದ್ದಾನೆ;

 | 
Uu

ಹಾಸನದ ಹಾಲಿ ಸಂಸದ, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ಹಗರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಈ ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಸಲ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಈಗಾಗಲೇ ಈ ವಿವಾದದಿಂದ ಅಂತರ ಕಾಯ್ದುಕೊಂಡಿದೆ. 

ಈ ಪ್ರಕರಣದಲ್ಲಿ ಮೊದಲು ಎಸ್‌ಐಟಿ ತನಿಖೆ ನಡೆಯಲಿ. ಪಕ್ಷಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ನಡುವೆ, ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದಾರೆ ಎಂಬ ವದಂತಿ ಹರಡಿದೆ.ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಒಳಗೊಂಡಿದ್ದಾರೆ ಎಂದು ಹೇಳಲಾದ ಸೆಕ್ಸ್ ಟೇಪ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ. 

ಈ ನಡುವೆ, ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಎಚ್‌ ಡಿ ರೇವಣ್ಣ ವಿರುದ್ಧ ಪೊಲೀಸ್ ದೂರು ವ್ಯಕ್ತವಾಗಿದ್ದು, ಎಫ್‌ಐಆರ್ ದಾಖಲಾಗಿದೆ. 2019 ಮತ್ತು 2022 ರ ನಡುವೆ ಪ್ರಜ್ವಲ್ ಮತ್ತು ಅವರ ತಂದೆ ಎಚ್‌ ಡಿ ರೇವಣ್ಣ ಅವರ ಮನೆ ಸಹಾಯಕರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂಬ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ.

ಇಬ್ಬರೂ ನಾಯಕರು ತಮ್ಮ ಮನೆಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಎಚ್.ಡಿ.ರೇವಣ್ಣ ಅವರ ಪತ್ನಿ ಇಲ್ಲದಿದ್ದಾಗಲೆಲ್ಲಾ ಮಹಿಳೆಯರನ್ನು ಸ್ಟೋರ್ ರೂಂಗೆ ಕರೆದು ಹಣ್ಣುಗಳನ್ನು ಕೊಡುತ್ತಿದ್ದರು. ಸೀರೆಯ ಪಿನ್ ಎಳೆದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಬಿಜೆಪಿಯಲ್ಲಿ ದೊಡ್ದ ರೇಪಿಸ್ಟ್ ಇದ್ದಾರೆ ಎಂದು ಕೂಡಾ ಹೇಳಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.