ಇಂದಿಗೂ ನನ್ನ ಮನಸ್ಸಿನಲ್ಲಿರುವುದು ಆತ ಮಾತ್ರ, ಶಾಕಿಂಗ್ ಹೇಳಿಕೆ ಕೊಟ್ಟ ನಟಿ ರಶ್ಮಿಕಾ ಮಂದಣ್ಣ
| Aug 8, 2025, 11:11 IST
ರಶ್ಮಿಕಾ ಮಂದಣ್ಣ ಸಿನಿರಂಗದ ಅತ್ಯಂತ ಬೇಡಿಕೆಯ ನಟಿಯರಲ್ಲಿ ಒಬ್ಬರು. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಇತರ ಭಾಷೆಗಳಲ್ಲಿ ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ 2023 ರ 'ವರಿಸು' ಸಿನಿಮಾದಲ್ಲಿ ತಮಿಳು ಸೂಪರ್‌ಸ್ಟಾರ್ ವಿಜಯ್ ದಳಪತಿ ಅವರೊಂದಿಗೆ ಕೆಲಸ ಮಾಡಿದ್ದರು. ದಳಪತಿ ವಿಜಯ್ ಮೇಲಿನ ತನ್ನ ಪ್ರೀತಿ ಕೇವಲ ಕ್ಷಣಿಕ ಮೆಚ್ಚುಗೆಯಲ್ಲ, ಬಾಲ್ಯದಲ್ಲಿ ಆಳವಾಗಿ ಬೇರೂರಿದ್ದ ವಿಷಯ ಎಂದು ಹೇಳಿಕೊಂಡಿದ್ದರು.
ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಸಿನಿ ಕರಿಯರ್ ಆರಂಭಿಸಿದರು. ಇಂದು ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳನ್ನ ನೀಡುತ್ತಾ ಬಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುತ್ತಾರೆ. ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಪ್ರೀತಿಸಿ, ಹಿರಿಯರ ಒಪ್ಪಿಗೆ ಪಡೆದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಕಾರಣಾಂತರಗಳಿಂದ ಅವರ ನಿಶ್ಚಿತಾರ್ಥ ಮುರಿದು ಬಿತ್ತು.
ಬಳಿಕ ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗಕ್ಕೆ ಹಾರಿದರು. ಆ ಬಳಿಕ ನಟಿ ರಶ್ಮಿಕಾ ಮಂದಣ್ಣ ಮತ್ತು ದೇವರಕೊಂಡ ಡೇಟಿಂಗ್ ವದಂತಿ ಶುರುವಾಯಿತು. ಇದೀಗ ರಶ್ಮಿಕಾ ಮಂದಣ್ಣ ತಮ್ಮ ಡ್ರೀಮ್ ಬಾಯ್ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ.
ನನಗೆ ಬಾಲ್ಯದಿಂದಲೂ ದಳಪತಿ ವಿಜಯ್ ಮೇಲೆ ಕ್ರಶ್ ಇತ್ತು" ಎಂದು ಈ ಹಿಂದೆ 2020 ರಲ್ಲಿ ಬಿಡುಗಡೆಯಾದ ತೆಲುಗು ಚಿತ್ರ ಭೀಷ್ಮ ಪ್ರಚಾರದ ಸಂದರ್ಭದಲ್ಲಿ ನಟಿ ರಶ್ಮಿಕಾ ಹೇಳಿದ್ದರು. ಈ ವಿಡಿಯೋ ಈಗ ವೈರಲ್ ಆಗಿದೆ.