ಬೆಂಗಳೂರಿಗೆ ಹೋಗಿ ರಾಜೀನಾಮೆ ಕೊಡಬೇಕು, ಒಮ್ಮೆಲೇ ರೊಚ್ಚಿಗೆದ್ದ ಜಮೀರ್

 | 
Bd

ಎರಡೂವರೆ ವರ್ಷದ ಬಳಿಕ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಶಾಸಕರ ಹೇಳಿಕೆ ವಿಚಾರವಾಗಿ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ನಾನು ಯಾವತ್ತಿದ್ರೂ ಸಿದ್ದರಾಮಯ್ಯ ಪರ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,ನಮ್ಮ ಪಕ್ಷ ಹೈಕಮಾಂಡ್ ಪಕ್ಷ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದಕ್ಕೆ ಯಾರು ವಿರೋಧ ಮಾತನಾಡುವ ಹಾಗೆ ಇಲ್ಲ. ನಾವು ನಮ್ಮ ಅಭಿಪ್ರಾಯ ಹೇಳಬಹುದು ಅಷ್ಟೆ. ನಾನು ಯಾವತ್ತು ಇದ್ದರು ಸಿದ್ದರಾಮಯ್ಯ ಪರ, ಇವತ್ತು ನಾನು ಸಿದ್ದರಾಮಯ್ಯ ‌ಪರನೇ.

ನನ್ನ ಅಭಿಪ್ರಾಯ ನಾನು ಹೇಳಬಹುದು. ಆದರೆ ತೀರ್ಮಾನ ನಾನು ತೆಗೆದುಕೊಳ್ಳೋಕೆ ಆಗುತ್ತಾ?. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಏನು ನಿರ್ಧಾರ ಮಾಡುತ್ತಾರೋ ಅದಕ್ಕೆ ನಾವು ಬದ್ದ ಎಂದು ಹೇಳಿದರು.
ನಮ್ಮ ಸಮುದಾಯಕ್ಕೆ ಸರ್ಕಾರ ಬದಲಾಯಿಸೋ ಶಕ್ತಿ ಇದೆ ಎಂಬ ರಾಜಾ ವೆಂಟಕಪ್ಪ ನಾಯಕ ಹೇಳಿಕೆ ವಿಚಾರವಾಗಿ ಮಾತನಾಡಿ, ಪವರ್ ಶೇರಿಂಗ್ ಬಗ್ಗೆ ಯಾವುದೇ ಚರ್ಚೆ ಅಗಿಲ್ಲ. 

ಇದೆಲ್ಲ ಮಾಧ್ಯಮಗಳ ಸೃಷ್ಟಿ ಅಷ್ಟೆ. ಬಿಜೆಪಿ ಅವರು ಏನೇ ತಿಪ್ಪರಲಾಗ ಹಾಕಿದ್ರು ಏನು ಮಾಡಲು ಸಾಧ್ಯವಿಲ್ಲ. ನಾವೆಲ್ಲ ಒಗ್ಗಟ್ಟಾಗಿ,ಒಂದಾಗಿ ಇದ್ದೇವೆ ಎಂದು ಹೇಳಿದರು. ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂಬ ಸಚಿವ ಮಹದೇವಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಶಾಸಕರು ಅವರ ಅಭಿಪ್ರಾಯ ಹೇಳುತ್ತಿದ್ದಾರೆ. ಕೊನೆಯಾದಾಗಿ ನಮ್ಮದು ಹೈಕಮಾಂಡ್ ಪಕ್ಷ. 

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಿರ್ಧಾರ ಫೈನಲ್, ಅವರು ನಾಳೆ ನನ್ನನ್ನ ತೆಗೆಯಬೇಕು ಅಂದ್ರೆ ತೆಗೆಯಬೇಕು ಅಷ್ಟೆ. ಸಚಿವರ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಒಂದು ವೇಳೆ ಬೇರೆ ಮುಖ್ಯಮಂತ್ರಿ ಮಾಡಿದರೆ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡಲು ಕೂಡಾ ಸಿದ್ದ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.