ಕೋರ್ಟ್ ಮೊರೆಹೋದ ಧರ್ಮಸ್ಥಳದ ಹೆಗ್ಗಡೆ ಕುಟುಂಬ, ಮಹೇಶ್ ಶೆಟ್ಟಿಗೆ ಖಡಕ್ ಎಚ್ಚರಿಕೆ ಕೊಟ್ಟ ಹೈಕೋರ್ಟ್

 | 
Hg

ಹನ್ನೊಂದು ವರ್ಷಗಳಿಂದ ಸೌಜನ್ಯಾ ಪ್ರಕರಣಕ್ಕೆ ನ್ಯಾಯ ಸಿಗುವಂತೆ ಬೆನ್ನು ಬಿಡದೆ ಹೋರಾಡುತ್ತಿರುವ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಎಚ್ಚರಿಕೆಯನ್ನು ನೀಡಿದೆ. ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶಿಸಿದೆ.

ಹಲವು ಸಭೆ, ಪ್ರತಿಭಟನೆಗಳಲ್ಲಿ ಹೆಗ್ಗಡೆ ಕುಟುಂಬ ಹಾಗೂ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನ ಹೇಳಿಕೆ ಹಿನ್ನಲೆ ಅವಹೇಳನಕಾರಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶಿಸಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಸರಕಾರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಕೋರ್ಟ್ ಆದೇಶವನ್ನು ನೀಡಿದೆ. 

ಕೋರ್ಟ್ ಆದೇಶ ಉಲ್ಲಂಘಿಸದಂತೆ ಮಹೇಶ್ ಶೆಟ್ಟಿಯವರಿಗೆ ಹೈಕೋರ್ಟ್ ಎಚ್ಚರಿಕೆಯನ್ನು ನೀಡಿದೆ.
ಸೌಜನ್ಯ ಅತ್ಯಾಚಾರ, ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ಸಭೆ, ಪ್ರತಿಭಟನೆಗಳು ನಡೆಯುತ್ತಿದೆ. ಈ ವೇಳೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಇನ್ನು ಮುಂದೆ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶಿಸಿದ ಹೈಕೋರ್ಟ ಸರ್ಕಾರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಸೂಚಿಸಿದ್ದು, ಕೋರ್ಟ್ ಆದೇಶ ಉಲ್ಲಂಘಿಸದಂತೆ ಎಚ್ಚರ ವಹಿಸಲು ಸೂಚಿಸಿದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.