ಹಿಂದೂ ಹುಲಿ ಚೈತ್ರ ಕುಂದಾಪುರ ಅವರಿಗೆ ಅಕ್ಕ ಕೂಡ ಇದ್ದಾರೆ, ಈ ಬಾರಿಯ ಬಿಗ್ ಬಾಸ್ ಗೆ ಭರ್ಜರಿ ಎಂಟ್ರಿ

 | 
Nx
ಹಿಂದೂಪರ ಸಂಘಟನೆಯ ನಾಯಕಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರು, ದೇಶಪ್ರೇಮದ ಭಾಷಣಗಳನ್ನು ಮಾಡಿ ಜನಪ್ರಿಯತೆ ಗಳಿಸಿದ್ದರು. ಬಳಿಕ ಐದು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸಹ ಸೇರಿದರು. ಬಳಿಕ ಬಿಗ್ಬಾಸ್ ಮತ್ತು ಇತರೆ ರಿಯಾಲಿಟಿ ಶೋಗಳಿಂದಾಗಿ ಮತ್ತೆ ಜನಪ್ರಿಯತೆ ಗಳಿಸಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೆ ಚೈತ್ರಾ ಕುಂದಾಪುರ ಅವರು ಪ್ರೀತಿಸಿದ ಹುಡುಗನ ಜೊತೆಗೆ ಮದುವೆ ಆಗಿದ್ದಾರೆ. ಇದೀಗ ಚೈತ್ರಾ ಕುಂದಾಪುರ ಅವರ ತಂದೆ, ಮಗಳ ವಿರುದ್ಧ ಹಲವು ಆರೋಪಗಳನ್ನ ಬಿಚ್ಚಿಟ್ಟು, ಅಪ್ಪನಿಗೆ ಒಂದು ತುತ್ತು ಊಟ ಹಾಕದ ಆಕೆಯದ್ದು ಎಂಥಹಾ ದೇಶಪ್ರೇಮ ಎಂದು ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರಿಗೆ ತಂಗಿ ಮಾತ್ರವಲ್ಲ ಅಕ್ಕಾ ಕೂಡ ಇದ್ದಾಳೆ.ಹಿಂದೂಪರ ಸಂಘಟನೆಯ ನಾಯಕಿ ಹಾಗೂ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಫೈರ್‌ಬ್ರ್ಯಾಂಡ್‌ ಚೈತ್ರಾ ಕುಂದಾಪುರ ಮೇ 9ರಂದು ಶ್ರೀಕಾಂತ್‌ ಕಶ್ಯಪ್‌ ಎಂಬುವವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗನ ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಸಾಲು ಸಾಲು ಆರೋಪಗಳನ್ನ ಮಾಡಿದ್ದಾರೆ. ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್‌ ಅವರು ನನ್ನ ಮಗಳು ದೊಡ್ಡ ಕಳ್ಳಿ. ನನ್ನನ್ನು ಮದುವೆಗೆ ಆಹ್ವಾನಿಸಿಲ್ಲ. ಕಳ್ಳರ ಮದುವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಚೈತ್ರ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್‌ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಕಳ್ಳರು ಕಳ್ಳರು ಮದುವೆಯಾಗಿದ್ದಾರೆ. ಆಕೆ ನನ್ನನ್ನು ಕರೆದಿಲ್ಲ ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ.
ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ. ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ ಎಂದು ಬಾಲಕೃಷ್ಣ ನಾಯ್ಕ್‌, ಮಗಳು ಚೈತ್ರಾ ಕುಂದಾಪುರ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.