ಹಿಂದೂ ಹುಲಿ ಸುಹಾಸ್ ಶೆಟ್ಟಿ ಕೊ#ಲೆಯ ಮತ್ತೊಂದು ಸಿಸಿಟಿವಿ ದೃಶ್ಯ ಲಭ್ಯ
May 5, 2025, 17:24 IST
|

ಪಕ್ಕಾ ಪ್ಲಾನ್ ಮಾಡಿ ಹಿಂದು ಹುಲಿ ಎಂದೇ ಕರೆಸಿಕೊಳ್ಳುವ ಸುಹಾಸ್ ಶೆಟ್ಟಿ ಹತ್ಯೆ ಮಾಡಿ ಮುಗಿಸಿದ್ದಾರೆ.ಎರಡು ವರ್ಷಗಳ ಹಿಂದೆ ಸುರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಎಂಬಾತನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮತ್ತು ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದಾರೆ.ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆದಿತ್ತು ಎನ್ನಲಾಗಿತ್ತು. ಇದೀಗ ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ತಲವಾರಿನಿಂದ ದಾಳಿ ನಡೆಸಿದ ದುಷ್ಕರ್ಮಿಗಳು, ನಡುರಸ್ತೆಯಲ್ಲೇ ಕೊಚ್ಚಿ ಕೊಚ್ಚಿ ಕೊಂದು ಹಾಕಿದ್ದಾರೆ. ಕೊಲೆಯ ವಿಡಿಯೋ ಸೆರೆಯಾಗಿದ್ದು, ಜಾಲತಾಣಗಳಲ್ಲಿ ವೈರಲ್ ಆಗಿದೆ.ರಾತ್ರಿ 8:27ರ ಸುಮಾರಿಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ ಹಲ್ಲೆ ಮತ್ತು ಕೊಲೆ ಘಟನೆ ವರದಿಯಾಗಿದೆ.
ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಹಾಶ್ ಶೆಟ್ಟಿ ಎಂಬಾತನನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ತಡೆದಿದೆ. 5ರಿಂದ 6 ಮಂದಿ ದುಷ್ಕರ್ಮಿಗಳು ಸುಹಾಶ್ ಶೆಟ್ಟಿ ಮೇಲೆ ಮಾರಕ ಆಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದ್ದಾರೆ. ಅವರನ್ನು ತಕ್ಷಣ ಎ.ಜೆ.ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಒಬ್ಬ ಪಕ್ಕಾ ಪ್ಲ್ಯಾನ್ ಮಾಡಿಯೇ ಸುಹಾಸ್ ಶೆಟ್ಟಿಯ ಕತೆ ಮುಗಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರು ಸುಹಾಸ್ ಶೆಟ್ಟಿ ತನ್ನ ಸಹಚರರ ಜೊತೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರಿನ ಮೂಲಕ ಸುಹಾಸ್ ಕಾರನ್ನ ಚೇಸ್ ಮಾಡಿದ್ದಾರೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ, ಮೀನಿನ ಟೆಂಪೋ ಮೂಲಕ ಸುಹಾಸ್ ಕಾರಿಗೆ ಡಿಕ್ಕಿಹೊಡೆದಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಸುಹಾಸ್ ಕಾರು ಸಲೂನ್ಗೆ ನುಗ್ಗಿದೆ. ಇದೇ ವೇಳೆ ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರು ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ಸಾರ್ವಜನಿಕರ ಕಣ್ಣೆದುರೇ ಸುಹಾಸ್ ಮೇಲೆ ಮುಗಿಬಿದ್ದಿದ್ದಾರೆ. ರಸ್ತೆಯಲ್ಲೇ ಕೊಚ್ಚಿಕೊಂದಿದ್ದಾರೆ. ಭೀಕರ ಹತ್ಯೆಯ ಲೈವ್ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.