ಪಕ್ಷದಿಂದ ಉಚ್ಚಾಟನೆ ಬಳಿಕ ದೆಹಲಿಯಲ್ಲಿ ಕಣ್ಣು ತುಂಬಾ ನೀರು ತುಂಬಿಕೊಂಡು ಭಾವುಕರಾದ ಹಿಂದೂ ಹುಲಿ ಯತ್ನಾಳ್
Mar 27, 2025, 12:21 IST
|

ಒಂದೆಡೆ ಗಮನ ಸೆಳೆಯುತ್ತಿರುವ ಹನಿಟ್ರ್ಯಾಪ್ ಕಹಾನಿ. ಮತ್ತೊಂದೆಡೆ ಉಚ್ಚಾಟನೆ ಹೀಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಆರೋಪದ ಮೇರೆಗೆ ರೆಬೆಲ್ ಶಾಸಕರಾಗಿದ್ದ ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ವಿಜಯಪುರ ನಗರ ಶಾಸಕರಾದ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.
ಈ ಮೂಲಕ ರಾಜ್ಯ ಬಿಜೆಪಿಯಲ್ಲಿದ್ದ ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಮೂಲಕ ರೆಬೆಲ್‌ಗಳಿಗೆ ಹೈಕಮಾಂಡ್ ಸ್ಪಷ್ಟ ಎಚ್ಚರಿಕೆಯನ್ನೂ ನೀಡಿದೆ. ಉಚ್ಛಾಟನೆ ಬೆನ್ನಲ್ಲೇ ಯತ್ನಾಳ್ ಅವರು ಪ್ರತಿಕ್ರಿಯಿಸಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.ಯತ್ನಾಳ್, ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ ಎಂದು ಹೈಕಮಾಂಡ್ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಇನ್ನು ಪಕ್ಷವು ನನಗೆ ಪ್ರತಿಫಲ ನೀಡಿದೆ. ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.
ಎಲ್ಲ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ಸರ್ವಶಕ್ತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. ಇನ್ನು ಯತ್ನಾಳ್ ಅವರು ಪುರಂದರ ದಾಸರ ವಚನಗಳ ಮೂಲಕವೂ ಹೈಕಮಾಂಡ್ ಹಾಗೂ ಎದುರು ಬಣದ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಇದನ್ನು ಬರೆಯುವಾಗ ಪುರಂದರ ದಾಸರು ಹೇಳಿದ ಮಾತು ನೆನಪಾಗುತ್ತಿದೆ. ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ. ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡಲು ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ, ಸತ್ಯವಂತರಿಗಿದು ಕಾಲವಲ್ಲ ಎಂದು ಯತ್ನಾಳ್ ಈ ಸಾಲುಗಳನ್ನು ಉಲ್ಲೇಖಿಸಿ ಆಕ್ರೋಶ ಹೊರಹಾಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.