9ನೇ ತರಗತಿ ವಿ ದ್ಯಾರ್ಥಿನಿಗೆ ಸ್ವರ್ಗ ತೋರಿಸ್ತೀನಿ ಅಂತ ಗ ರ್ಭಿಣಿ ಮಾಡಿದ ಹಾಸ್ಟೆಲ್ ವಾರ್ಡನ್
ಇತ್ತೀಚಿಗೆ ಮಕ್ಕಳು ಪ್ರೀತಿ ಪ್ರೇಮದ ಹೆಸರಲ್ಲಿ ದಾರಿತಪ್ಪುತ್ತಿದ್ದಾರೆ. ಹೌದು ಹಾಸ್ಟೆಲ್ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಹಾಸ್ಟೆಲ್ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸದ್ಯ ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವಿನಿಂದ ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದ್ದಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಆಸ್ಪತ್ರೆ ಸಿಬ್ಬಂದಿ ಸ್ಕ್ಯಾನಿಂಗ್ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ತವ್ಯಲೋಪದಡಿ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಬಾಲಕಿಯ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು. ಆದರೆ ಅದನ್ನು ಅಷ್ಟಾಗಿ ಗಮನ ನೀಡದ ವಾರ್ಡನ್ ಸರಿ ಹೋಗುತ್ತಾರೆ ಎಂದು ಬಿಟ್ಟು ಬಿಟ್ಟಿದ್ದರು. ಆದರೆ ಈ ಘಟನೆಗೆ ಸಂಬಂಧಿಸಿ ಪೊಲೀಸರು ವಾರ್ಡನ್ ಗೆ ಕೂಡ ನೋಟಿಸ್ ಜಾರಿಗೊಳಿಸಿದ್ದಾರೆ. ಇನ್ನು ಇದಕ್ಕೆ ಕಾರಣರಾದವರನ್ನು ಹುಡುಕುತ್ತಿದ್ದಾರೆ.