ಸಾಲು ಮರದ ತಿಮ್ಮಕ್ಕ ಆಸ್ಪತ್ರೆಯಲ್ಲಿ ಹೇಗಿದ್ದಾರೆ, ದತ್ತು ಮಗ ಮಾಡುತ್ತಿರುವ ಕೆಲಸ ಏನು ಗೊ.ತ್ತಾ

 | 
ಹಿಹಿ

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮೃತಪಟ್ಟಿದ್ಧಾರೆ ಎನ್ನುವ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಬೆಳಗಿನಿಂದ ಹರಿದಾಡಿತು. ಅವರ ಸಾಕುಪುತ್ರ ಉಮೇಶ್‌, ತಿಮ್ಮಕ್ಕ ಅವರಿಗೆ ಚಿಕಿತ್ಸೆ ನಡೆದಿದೆ.ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಗೊಂದಲಗಳಿಗೆ ತೆರೆ ಎಳೆದರು. ನೂರು ವರ್ಷ ದಾಟಿರುವ ತಿಮ್ಮಕ್ಕ ಅವರಿಗೆ ಎರಡು ತಿಂಗಳಿನಿಂದಲೂ ಚಿಕಿತ್ಸೆ ನೀಡಲಾಗುತ್ತಿದೆ. 

ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವಿಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ಬೇಲೂರು ಸಮೀಪದ ಬಳ್ಳೂರಿನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು.ಸೆಪ್ಟೆಂಬರ್‌ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 

ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆಕೆಗೆ ಆಸ್ತಮಾದ ಇತಿಹಾಸವಿದೆ, ಆದರೆ ಚಿಂತಿಸುವ ಅಗತ್ಯವಿಲ್ಲ. ನಾವು ಇನ್ನೂ 2-3 ದಿನಗಳವರೆಗೆ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅಪೊಲೊದಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲು ಮರದ ತಿಮ್ಮಕ್ಕ ಅವರನ್ನು ಸಿಎಂ ಸಿದ್ದರಾಮಯ್ಯ, ಸಚಿವರಾದ ಚಲುವರಾಯಸ್ವಾಮಿ, ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಎರಡು ತಿಂಗಳ ಹಿಂದೆ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ವೈದ್ಯರ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ, ನಿಧನ ಅನ್ನೋ ಸುದ್ದಿ ಸುಳ್ಳು. ಇಂತಹ ಸುದ್ದಿಗಳನ್ನು ಹರಡಬೇಡಿ. ಅವರು ಬೇಗ ಗುಣಮುಖರಾಗುವಂತೆ ಬೇಡಿಕೊಳ್ಳಿ ಎಂದು ದತ್ತು ಪುತ್ರ ಉಮೇಶ್‌ ಮನವಿ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.