ಧರ್ಮದ ಪರ ನಿಂತ ಗಂಡನ ಪ್ರಾಣ ಹೋಯಿತು, ರಾಜಕಾರಣಿಗಳ ಮಕ್ಕಳು ಎಂಜಾಯ್ ಮಾಡುತ್ತಿದ್ದಾರೆ

 | 
Hh

ಧರ್ಮದ ಹೆಸರಲ್ಲಿ ನಾನು ನನ್ನ ಗಂಡನನ್ನೇ ಕಳೆದುಕೊಂಡೆ. ಪುಟ್ಟ ಮಗುವಿಗೆ ಅಪ್ಪ ಇಲ್ಲದಂತಾದ ಎಂದು ವೇಣುಗೋಪಾಲ ಅವರ ಪತ್ನಿ ಪೂರ್ಣಿಮಾ ಕಣ್ಣೀರಿಟ್ಟಿದ್ದಾರೆ. ಹೌದು. ಜುಲೈ 9 ರಂದು ತಿ ನರಸೀಪುರದಲ್ಲಿ ಯುವ ಬ್ರಿಗೇಡ್‌ ಕಾರ್ಯಕರ್ತ ವೇಣುಗೋಪಾಲ್‌ ನಾಯಕ್‌ ಹತ್ಯೆಯಾಗಿದೆ. ಈ ಬಗ್ಗೆ ಅವರ ಪತ್ನಿ ಪೂರ್ಣಿಮಾ ಅವರು ಮಾತನಾಡಿದ್ದು, ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ. 

ಇದು ವೈಯಕ್ತಿಕ ಕಾರಣದ ಕೊಲೆ ಅಲ್ಲ ಎಂದು ಹೇಳಿದ್ದಾರೆ. ಅದಲ್ಲದೇ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಇಲ್ಲ ಅಂದ್ರೇ ನಾನು, ನನ್ನ ಮಗಳು ನನ್ನ ಗಂಡ ಸತ್ತಂತೆಯೇ ಸಾಯುತ್ತೇವೆ ಎಂದರು. ನನ್ನ ಗಂಡ ಹತ್ತು ಜನ ಬಂದರೂ ಹೆದರುತ್ತಿದ್ದಿಲ್ಲ. ಇದು ವೈಯಕ್ತಿಕ ಕಾರಣದ ಕೊಲೆ ಅಲ್ಲ, ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಯುವ ಬ್ರಿಗೇಡ್‌ನ ಮೃತ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಪತ್ನಿ ಪೂರ್ಣಿಮಾ ಹೇಳಿದ್ದಾರೆ.

ತಿ ನರಸೀಪುರದಲ್ಲಿ ಮಾತನಾಡಿದ ಅವರು, ನಾನು, ವೇಣುಗೋಪಾಲ್ ಪ್ರೀತಿಸಿ ಮದುವೆ ಆಗಿದ್ದೆವು. ಮೂರು ವರ್ಷಗಳಿಂದ ಹನುಮ ಜಯಂತಿ‌ ಆಚರಣೆ ಮಾಡುತ್ತಿದ್ದೇವೆ. ನನ್ನ ಗಂಡನ ಬಳಿ ಹಣ ಇಲ್ಲ, ಅಧಿಕಾರ ಇಲ್ಲ. ಆದರೂ ಅದ್ದೂರಿಯಾಗಿ ಹನುಮ ಜಯಂತಿ ಆಚರಣೆ ಮಾಡಿದ್ದೇವು. ಅದನ್ನು ಸಹಿಸದೇ ಕೊಲೆ ಮಾಡಿದ್ದಾರೆ. ನನ್ನ ಗಂಡನ ಸಾವಿಗೆ ನ್ಯಾಯ ಸಿಗಬೇಕು. ಇಲ್ಲವಾದರೇ ನಾನು, ನನ್ನ ಮಗಳು ಗಂಡ ಸತ್ತಂತೆಯೇ ಸಾಯುತ್ತೇವೆ ಎಂದರು.

ಇಂದು ನನ್ನ ಗಂಡನನ್ನು ಸಾಯಿಸಿದ್ದಾರೆ. ಮುಂದಿನ ವರ್ಷ ನಾನು ಹನುಮ ಜಯಂತಿ ಮಾಡುತ್ತೇನೆ. ಆಗ ನನ್ನನ್ನೂ ಸಾಯಿಸುತ್ತಾರೆ. ಮುಂದಿನ ವರ್ಷ ನನ್ನ ಮಗಳು ಹನುಮ ಜಯಂತಿ ಮಾಡಿದ್ರೇ ಅವಳನ್ನೂ ಸಾಯಿಸುತ್ತಾರೆ. ಅಲ್ಲಿಗೆ ಹಿಂದೂ ಧರ್ಮವೂ ಸಾಯುತ್ತದೆ. ನನ್ನ ಗಂಡನ ಏಳಿಗೆ ಸಹಿಸದೇ ಕೊಲೆ ಮಾಡಿದ್ದಾರೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಕೇಳಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.