ನಾನು ಡಿಕೆ ಸುರೇಶ್ ಪತ್ನಿ, ಸುಂದರಿ ಆಂಟಿಯಿಂದ ಡಿಕೆ ಸುರೇಶ್ ಮೇಲೆ ಕಣ್ಣು
May 2, 2025, 16:53 IST
|

ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ.ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.ಆದರೆ ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನ ಪ್ರಶ್ನೆ ಮಾಡುತ್ತಾರೆ, ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ.
ಸಾಮಾನ್ಯವಾಗಿ ಜನರಿಗೆ ಸ್ಟೇಟಸ್ ಬೇಕು, ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹರಿ ಬಿಟ್ಟಿದ್ದಾರೆ. ಫೇಸ್‌ಬುಕ್‌ನಲ್ಲಿ PavitraDksuresh Dodalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ಮಹಿಳೆ, ಏ.8ರಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ. ಡಿ .ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಸುರೇಶ್ ಅವರ ಪತ್ನಿ ಎಂದು ದುರುದ್ದೇಶದಿಂದ ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆ ಸಹ ದುರುಪಯೋಗಪಡಿಸಿ ಕೊಂಡಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಪ್ರದೀಪ್ ತಿಳಿಸಿದ್ದಾರೆ. ಇನ್ನು ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಪವಿತ್ರ, ಮೈಸೂರಿನಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಗಂಡನಿಂದ ವಿಚ್ಛೇದನ ಪಡೆದಿದ್ದ ಮಹಿಳೆ ಸದ್ಯ ಮೈಸೂರಿನಲ್ಲಿ ವಾಸವಿದ್ದಾರೆ. ಮೈಸೂರಿನಲ್ಲಿ ಅಕ್ಕ ಪಕ್ಕದ ಮನೆಯವರಿಂದ ಕಿರಿಕಿರಿ ಹಿನ್ನೆಲೆ ಡಿಕೆ ಸುರೇಶ್ ಪತ್ನಿ ಎಂದರೆ ಜನ ಹೆದರುತ್ತಾರೆ ಎಂಬ ಕಾರಣಕ್ಕೆ ನಾನು ಅವರ ಪತ್ನಿ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಸದ್ಯ ಮಹಿಳೆಯನ್ನ ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023