ಈ ಸ್ಟೋರಿ ಕೇಳಿದರೆ ಮೈ ರೋಮಾಂಚನವಾಗುತ್ತದೆ, ಅವತ್ತು ಬಂಗಾರಪ್ಪನವರು ಮಾಡಿದ್ದೇನು ಗೊತ್ತಾ

 | 
್ಹಹ್

ಬಂದ್ ಕರೆ ಹಿನ್ನೆಲೆಯಲ್ಲಿ ಕಾವೇರಿ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಿಲುವು ಸ್ಪಷ್ಟಪಡಿಸಿದ್ದು, ಈ ಬಗ್ಗೆ ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿ ವಜಾಮಾಡಿರುವ ಕಾರಣ ಸೆಪ್ಟೆಂಬರ್ 26ರ ವರೆಗೆ 5,000 ಕ್ಯುಸೆಕ್ ನೀರು ಹರಿಸುವುದು ನಮಗೆ ಅನಿವಾರ್ಯವಾಗಿದೆ. 

ಸೆ.26ರ ನಂತರ ನೀರು ಬಿಡಲ್ಲ ಎಂದು ಮತ್ತೆ ಪ್ರಾಧಿಕಾರಕ್ಕೆ ಹೇಳ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಮಳೆ ಕೊರತೆಯಿಂದಾಗಿ ಉದ್ಭವವಾಗಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿವಾದ ಈಗ ನ್ಯಾಯಾಂಗ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ಧವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ.

ನೆಲ-ಜಲ-ಭಾಷೆಯ ಹಿತರಕ್ಷಣೆಯ ವಿಷಯ ಬಂದಾಗ ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ನಾವೆಲ್ಲ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು. ಕಾವೇರಿ ನದಿ ನೀರಿನ ವಿವಾದ ಇದೇ ಮೊದಲ ಸಲ ಹುಟ್ಟಿಕೊಂಡದ್ದಲ್ಲ. ದಶಕಗಳ ಕಾಲದಿಂದ ಇದು ನಡೆಯುತ್ತಿದೆ. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಕೂಡಾ ಸತ್ಯ ಮತ್ತು ಸ್ಪಷ್ಟವಾಗಿದೆ. 

ಈಗ ನನ್ನ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಯಾಕೆ ಇದೇ ಮಾತು ಹೇಳಿಲ್ಲ. ಹಿಂದೆಲ್ಲ ಕಾವೇರಿ ನದಿನೀರಿನ ವಿವಾದ ಹುಟ್ಟಿಕೊಂಡಾಗ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಟ್ಟು ಒಗ್ಗಟ್ಟಿನಿಂದ ನಡೆದುಕೊಂಡಿವೆ. ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ. 

ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ. ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ. ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳೊಂದಿಗೆ ನಮ್ಮ ವಾದವನ್ನು ಮಂಡಿಸಿಲ್ಲ ಎನ್ನುವ ಆರೋಪ ಸತ್ಯಕ್ಕೆ ದೂರವಾದುದ್ದು. ಪ್ರಾಧಿಕಾರದ ಮುಂದೆ ನಮ್ಮ ಅಧಿಕಾರಿಗಳು ಎಲ್ಲ ದಾಖಲೆಗಳೊಂದಿಗೆ ರಾಜ್ಯದ ನಿಲುವನ್ನು ಮಂಡಿಸಿದ್ದಾರೆ. 

ಅದೇ ರೀತಿ ಸುಪ್ರೀಂ ಕೋರ್ಟ್ ನಲ್ಲಿ ಕೂಡಾ ನಮ್ಮ ಹಿರಿಯ ವಕೀಲರು ಬಲವಾಗಿ ವಾದ ಮಾಡಿದ್ದಾರೆ. ನೆಲ-ಜಲ-ಭಾಷೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಲು ಹೋಗದೆ ಒಮ್ಮತದಿಂದ ಒಗ್ಗಟ್ಟಾಗಿ ಎದುರಾಗಿರುವ ಬಿಕ್ಕಟ್ಟನ್ನು ಬಗೆಹರಿಸಲು ಪ್ರಯತ್ನ ಮಾಡಬೇಕು. ಇಂತಹದ್ದೊಂದು ಪರಂಪರೆ ಕರ್ನಾಟಕಕ್ಕೆ ಇದೆ. ಈ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೇಲೆ ಇದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.