ನಾನು ಮಠದಲ್ಲಿ ಬೆಳೆದವನು, ಹಿಂದೂಗಳ ಬಗ್ಗೆ ಹೊಗಳಿದ ಜಮೀರ್ ಅಹಮ್ಮದ್ ಖಾನ್
Nov 17, 2024, 13:46 IST
|

ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವರು ಅಂತಾ ಲಘುವಾಗಿ ಮಾತಾಡಿದ್ದಾರೆ. ಹೀಗಾಗಿ ಯಾಕೆ ಅವರ ಬಳಿ ಬಂದು ಓಟ್ ಕೇಳುತ್ತೀರಿ? ನಿನ್ನೆ ಕುಮಾರಸ್ವಾಮಿ ಅದೇ ಮಾತು ಹೇಳಿದ್ದಾರೆ ಎಂದ ಜಮೀರ್ ಅಹ್ಮದ್ ಖಾನ್, ಹೌದು ಸ್ವಾಮಿ ನಾವು ಬಡವರು ಅವರ ಬಳಿ ಯಾಕೆ ಓಟ್ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ಪ್ರಶ್ನೆ ನಂದು, ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಎಂದು ಹೇಳಿದರು.
ಇನ್ನು, ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ ಎಂದ ಜಮೀರ್ ಅಹ್ಮದ್ ಖಾನ್, ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ ಎಂದು ಹೇಳಿದರು.
ನಂದು ನನಗೆ, ಅವರ ಅಭಿಪ್ರಾಯ ಹೇಳಿದ್ದಾರೆ. ಏನಂತ ಹೇಳಿದ್ದಾರೆ. ಡಿಕೆಶಿ ಹೇಳಿಕೆ ನಾನು ನೋಡಿಲ್ಲ. ಜಮೀರ್ ಬಂದಿದ್ದು ಪ್ಲಸ್ ಆಗಿದೆ ಸ್ವಲ್ಪ. ಹೇಳಿಕೆಯಿಂದ ಅನಾನುಕೂಲ ಆಗಿದೆ ಅಂತ ಯೋಗಿಶ್ವರ್ ಹೇಳಿದ್ದಾರೆ. ಬರೆದಿಟ್ಟುಕೊಳ್ಳಿ, ಚನ್ನಪಟ್ಟಣದಲ್ಲಿ ಏನೇನು ಆಗುವುದಿಲ್ಲ.
ಚನ್ನಪಟ್ಟಣದಲ್ಲಿ ಮೂರು ದಿನ ಪ್ರಚಾರ ಮಾಡಿದ್ದೇನೆ. ಯೋಗೇಶ್ವರ್ 18 ರಿಂದ 20 ಸಾವಿರ ಮತದಿಂದ ಗೆಲ್ಲುತ್ತಾರೆ ಬರೆದಿಟ್ಟುಕೊಳ್ಳಿ ಎಂದು ಭರವಸೆ ವ್ಯಕ್ತಪಡಿಸಿದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,16 May 2025