ನಾನು ಯಾವ ಹುಡುಗಿ‌ ಹಿಂದೇನು ಹೋಗಿಲ್ಲ ಸ್ವಾಮಿ, ತಮ್ಮ ಯುವನಿಗೆ ವಾರ್ನಿಂಗ್ ಕೊಟ್ಟ ಅಣ್ಣ ವಿನಯ್

 | 
Ha
ವಿನಯ್ ರಾಜ್​ಕುಮಾರ್ ಹೆಚ್ಚಿನ ಅಬ್ಬರ ಇಲ್ಲದೆ, ಸರಳವಾದ ಸಿನಿಮಾಗಳನ್ನು ಮಾಡುತ್ತಾ ತಮ್ಮದೇ ಭಿನ್ನ ಹಾದಿಯನ್ನು ಮಾಡಿಕೊಂಡು ಸಾಗುತ್ತಿದ್ದಾರೆ. ವಿನಯ್ ಆಯ್ಕೆ ಮಾಡಿಕೊಳ್ಳುವ ಸಿನಿಮಾಗಳು ಒಂದಕ್ಕಿಂತಲೂ ಒಂದು ಭಿನ್ನವಾಗಿರುತ್ತವೆ. ಬಹುಮುಖ್ಯವಾಗಿ ವಿನಯ್, ಎಲಿವೇಷನ್​ಗಳಿಗಾಗಿ ಅಲ್ಲದೆ ಕತೆಯ ಕಾರಣಕ್ಕೆ ಸಿನಿಮಾ ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ಮತ್ತೊಂದು ಸ್ಟೋರಿ ಓರಿಯೆಂಟೆಡ್ ಸಿನಿಮಾ ಅನ್ನು ವಿನಯ್ ಆರಿಸಿಕೊಂಡಿದ್ದಾರೆ.
ಸಿನಿಮಾದ ಹೆಸರು ಅಂದೊಂದಿತ್ತು ಕಾಲ. ಇದು 80-90ರ ದಶಕದ ಕತೆ ಹೇಳುವ ಸಿನಿಮಾ. ಸಿನಿಮಾದಲ್ಲಿ ವಿನಯ್ ನಿರ್ದೇಶಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅದಿತಿ ಪ್ರಭುದೇವ ನಾಯಕಿ. ಸಿನಿಮಾದ ಪಾತ್ರದ ಬಗ್ಗೆ ವಿನಯ್ ಹೇಳಿರುವ ಮಾತುಗಳನ್ನು ಕೇಳಿ. ನಟ ವಿನಯ್ ರಾಜಕುಮಾರ್  ಮಾತನಾಡುತ್ತಾ ಈ ಚಿತ್ರದ  ಮೊದಲ ಸಾಂಗ್ ದೊಡ್ಡ ಹಿಟ್ ಆಗಿದೆ. ನಾನು ಕೂಡ ಸಾಂಗ್ ಅನ್ನು ಫ್ಯಾನ್ಸುಗಳು ರೀಲ್ಸ್ ಮಾಡಿದ್ದು ನೋಡಿದೆ. 
ಮಿಲಿಯನ್ಸ್ ವಿವ್ಯೂ ರಿಚ್ ಆಗಿರೋದು ನಮ್ಮ ತಂಡಕ್ಕೂ ನನಗೂ ಖುಷಿ ಇದೆ. ಈಗ ನಮ್ಮ ಚಿತ್ರದ ಎರಡನೇ ಹಾಡು ಬಿಡುಗಡೆಯಾಗುತ್ತಿದೆ, ಇದು ನನ್ನ ಪೆವರೇಟ್ ಗೀತೆ. ನಾನು ನಿರ್ದೇಶಕ ಕೀರ್ತಿ ಗೆ ಇದನ್ನೇ ಮೊದಲು ಬಿಡಿ ಎಂದಿದ್ದೆ. ಈ ಚಿತ್ರದಲ್ಲಿ ನಾನು 16ವರ್ಷದ ಹುಡುಗನ ಗೆಟಪ್ ನಲ್ಲಿ ಮಾಡುವುದು ಚಾಲೆಂಜ್ ಆಗಿತ್ತು. ವೈಟ್ ಲಾಸ್ ಮಾಡುವುದು ಕಷ್ಟ ಆಗಿತ್ತು. ಹಾಡು ತುಂಬಾ ಚೆನ್ನಾಗಿ ಬಂದಿದೆ. ಲೊಕೇಶನ್, ಸಾಂಗ್ ಎಲ್ಲವೂ ಸೊಗಸಾಗಿದೆ. ಶಾಲಾ ದಿನಗಳಲ್ಲಿ ಇಷ್ಟಪಟ್ಟ ಹುಡುಗಿಯ ಹಿಂದೆ ಓಡಾಡಿದ್ದೇನೆ. 
ಆದರೆ ನಿಜ ಜೀವನದಲ್ಲಿ ಹತ್ತನೇ ತರಗತಿ ಓದುವಾಗ ನಾನು ಬಹಳ ಮುಗ್ಧ ಹುಡುಗ. ಮೂರು ಶೇಡ್ ಗಳಲ್ಲಿ ನನ್ನ ಪಾತ್ರ ಸಾಗುತ್ತದೆ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ. ನಿಮ್ಮ ಬೆಂಬಲ ಇರಲಿ ಎಂದರು. ಇನ್ನು ಈ ಚಿತ್ರದ ಶಾಲಾ ವಿದ್ಯಾರ್ಥಿಯ ಹಾಡಿನಲ್ಲಿ ಕಾಣಿಸಿಕೊಂಡಿರುವ ಯುವ ನಟಿ ನಿಶಾ ರವಿಕೃಷ್ಣನ್ ಮಾತನಾಡುತ್ತಾ ಇದರಲ್ಲಿ ನನ್ನದೊಂದು ಸಣ್ಣ ಪಾತ್ರವಾದರೂ ಬಹಳ ಇಂಪಾರ್ಟೆಂಟ್ ಆಗಿದೆ. 
ನಿರ್ದೇಶಕರು, ನಿರ್ಮಾಪಕರು ತುಂಬಾ ಸಹಕಾರ ನೀಡಿದ್ದಾರೆ. ಅದೇ ರೀತಿ ನಟ ವಿನಯ್ ರಾಜಕುಮಾರ್ ಜೊತೆ ಅಭಿನಯಿಸಿದ್ದು ಖುಷಿ ತಂದಿದೆ. ಸುಂದರ ಪ್ರಮುಖ ಪಾತ್ರವಾಗಿದ್ದು, ಖಂಡಿತ ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub