ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ, ಮತ್ತೆ ಗುಡುಗಿದ ಕಮಲ್ ಹಾಸನ್
Jun 4, 2025, 10:58 IST
|

ಕಮಲ್ ಹಾಸನ್ ಅವರ ಹೊಸ ಸಿನಿಮಾ ಬಿಡುಗಡೆಗೆ ಭದ್ರತೆ ಕೋರಿದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸುವಂತೆ ಸೂಚಿಸಿದ್ದಾರೆ.
ತಮಿಳು ನಟ ಮತ್ತು ನಿರ್ಮಾಪಕ ಕಮಲ್ ಹಾಸನ್ ಅವರು ತಮ್ಮ ಹೊಸ ಸಿನಿಮಾ ಥಗ್ ಲೈಫ್ ಸಿನೆಮಾ ಬಿಡುಗಡೆಗೆ ಭದ್ರತೆ ನೀಡುವಂತೆ ಕೋರಿ ಡಿಜಿಐಜಿಪಿ, ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುವಂತೆ ಸಲ್ಲಿಸಿರುವ ಅರ್ಜಿ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆಗೆ ಒಳಪಟ್ಟಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿ ಕಮಲ್ ಹಾಸನ್ ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ಇದೇ ವೇಳೆ ವಿಚಾರಣೆ ನಾಳೆಗೆ ಮುಂದೂಡುವಂತೆ ಸರ್ಕಾರದ ಪರ ವಕೀಲ ಭಾನುಪ್ರಕಾಶ್ ಮನವಿ ಮಾಡಿದರು.
ಕಮಲ್ ಹಾಸನ್ ಅವರು ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗೆ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಇದೇ ಕಾರಣದಿಂದಾಗಿ ಸಿನಿಮಾಕ್ಕೆ ವಿರೋಧ ಉಂಟಾಗಿದೆ. ವಿಚಾರಣೆ ವೇಳೆ ಕಮಲ್ ಹಾಸನ್ ರನ್ನು ನ್ಯಾಯಾಧೀಶರು ತೀವ್ರ ತರಾಟೆಗೆ ತೆಗೆದುಕೊಂಡರು.
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದದ್ದೆಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದಾರೆ. ಅವರು ಇತಿಹಾಸಕಾರರೇ? ಇಂತಹ ಹೇಳಿಕೆಗಳಿಂದ ಕನ್ನಡಿಗರ ಭಾವನೆಗೆ ಧಕ್ಕೆ ಉಂಟಾಗುತ್ತದೆ. ಕಮಲ್ ಹಾಸನ್ ಅವರು ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆ ಕೇಳಬೇಕು ಎಂದು ನ್ಯಾಯಾಧೀಶರು ಹೇಳಿದರು. ಕ್ಷಮೆ ಕೇಳಿದ್ರೆ ಅವರ ಮನವಿ ಪರಿಗಣಿಸಲಾಗುವುದು. ಜಲ, ನೆಲ, ಭಾಷೆ ಬಗ್ಗೆ ಭಾವನೆ ಹೊಂದಿದ್ದಾರೆ. ರಾಜ್ಯದಲ್ಲಿ ಭಾಷೆ ಪ್ರಮುಖವಾದುದು. ಯಾವುದೇ ಭಾಷೆ ಆಗಲಿ. ಒಂದು ಭಾಷೆ ಹುಟ್ಟಿದೆ ಎಂದರೆ ಹೇಗೆ? ಕ್ಷಮೆ ಕೇಳಲಿ, ಆ ನಂತರ ಅವರ ಮನವಿ ಪರಿಗಣಿಸಲಾಗುವುದು ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.