ಪ್ರಶ್ನೆ ಕೇಳಿದ್ರೆ ಈ ತರ ಕೇಳಬೇಕು, ಸುಮಲತಾ ಗರಂ
Mar 16, 2024, 18:52 IST
|
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸುವುದು ಬಹುತೇಕ ಕನ್ಪರ್ಮ್. ನೂರಕ್ಕೆ ಐನೂರು ನಾನೇ ಮಂಡ್ಯದ ಅಭ್ಯರ್ಥಿ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಡೌಟು. ಈ ನಡುವೆ, ಚುನಾವಣೆಯ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸುಮಲತಾ ಬಗ್ಗೆ ಸಾಫ್ಟ್ ಆಗಿದ್ದಾರೆ, ಅವರು ನನ್ನ ಸಹೋದರಿಗೆ ಸಮಾನ ಎಂದಿದ್ದಾರೆ.
ಆದರೂ ಅದ್ಯಾಕೋ ಜನ ಸುಮಲತಾ ವಿರುದ್ಧ ಮುನಿಸಿಕೊಂಡಂತೆ ಕಾಣ್ತಿದೆ. ಹೌದು ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದು, ಸುಮಲತಾ ಅವರ ಟೆನ್ಷನ್ ಹೆಚ್ಚಿಸಿದ್ದಾರೆ. ಜನ ಕೂಡ ಇದಕ್ಕೆ ಬೆಂಬಲಿಸುವ ಹಾಗೆ ಕಾಣುತ್ತಿದೆ.
ಸುಮಲತಾ ಅವರಿಗೆ ಮಂಡ್ಯದಿಂದ ಟಿಕೆಟ್ ಸಿಗದೇ ಇದ್ದರೂ ಬೆಂಗಳೂರು ಉತ್ತರ ಅಥವಾ ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎನ್ನುವ ವದಂತಿಗಳು ಇತ್ತು. ಆದರೆ ಈಗ ಈ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಸುಮಲತಾ ಅವರಿಗೆ ಅವಕಾಶ ಟಿಕೆಟ್ ಸಿಗಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ.
ಯಾವುದೇ ಕಾರಣಕ್ಕೂ ಮಂಡ್ಯ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದಿರುವ ಸುಮಲತಾ ಮತ್ತೊಮ್ಮೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರ ಎನ್ನುವ ಕುತೂಹಲ ಇದೆ. ಆದರೆ ಕಳೆದ ಬಾರಿಯಂತೆ ಈ ಬಾರಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸುವುದು ಸುಲಭವಲ್ಲ. ಹಾಗಾಗಿ ಅವರು ಬಿಜೆಪಿ ಜೊತೆ ಕೈ ಜೋಡಿಸಿದ್ದು ತಪ್ಪಾಯ್ತು ಎಂಬ ಮಾತು ಕೇಳಿ ಬರ್ತಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.