ನಾಳೆ ಶಾಲಾ ಕಾಲೇಜು ರಜೆ ಇಲ್ವಾ? ಹೊಸ ನಿರ್ಧಾರ ಕೈಗೊಂಡರ ಸರ್ಕಾರ

 | 
Bd

ಬೆಂಗಳೂರು: ಸ್ನೇಹಿತರೆ ನಮಸ್ಕಾರ, 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿರುವ ಸರ್ಕಾರಿ ನೌಕರರ ಜತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದ್ದು ಸಂಧಾನ ಸಭೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮುಷ್ಕರ ನಡೆಸುವುದಂತೂ ಪಕ್ಕಾ ಆಗಿದೆ. ಈ ಮೂಲಕ ಸರ್ಕಾರಿ ನೌಕರರ ಜತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನಡೆಸಿದ ಸಂಧಾನ ಮಾತುಕತೆ ಮುರಿದುಬಿದ್ದಿದೆ. ಸಭೆ ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್​ ಷಡಕ್ಷರಿ, ಮುಷ್ಕರದಿಂದ ಹಿಂಪಡೆಯುವ ಪ್ರಶ್ನೆಯೇ ಇಲ್ಲ.  

ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ . ಸರ್ಕಾರ ಯಾವಾಗ ಸಭೆಗೆ ಕರೆದರೂ ನಾವು ಹೋಗುತ್ತೇವೆ ಎಂದಿದ್ದಾರೆ.ಸಿಎಸ್ ಕಾಲಾವಕಾಶ ನೀಡುವಂತೆ ಕೇಳಿದ್ದಾರೆ. ನಾಳಿನ ಮುಷ್ಕರ ಕೈಬಿಡುವ ಪ್ರಶ್ನೆಯೇ ಇಲ್ಲ. ಸರ್ಕಾರಿ ನೌಕರ ನಮ್ಮ ಪದಾಧಿಕಾರಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುರೆಯುತ್ತೆ. ನೌಕರರ ಮನಸ್ಥಿತಿಗೆ ವಿರುದ್ದವಾಗಿ ನಡೆಯಲು ಆಗಲ್ಲ. ಎಲ್ಲಾ ಸರ್ಕಾರಿ ನೌಕರರು ಒಗ್ಗಟ್ಟಿನಿಂದ ಇದ್ದೇವೆ. ಸರ್ಕಾರ ವಿಳಂಬ ಧೋರಣೆ ಮಾಡುತ್ತಿದೆ ಎಂದು ಸಿಎಸ್ ಷಡಾಕ್ಷರಿ ಹೇಳಿದ್ದಾರೆ. 

ಇನ್ನು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಹೊಸ ಪಿಂಚಣಿ ನೀತಿ ಅಂದರೆ ಎನ್‌ಪಿಎಸ್‌ ರದ್ದತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಧುಮುಕಲಿದ್ದಾರೆ. ಶಾಲಾ–ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ, ನಗರ ಸ್ಥಳೀಯ ಸಂಸ್ಥೆಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾಯಂ ಪೌರ ಕಾರ್ಮಿಕರು, ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿಯೂ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. 

ಗ್ರಾಮ ಲೆಕ್ಕಿಗರಿಂದ ಹೆಚ್ಚುವರಿ ಜಿಲ್ಲಾಧಿಕಾರಿವರೆಗಿನ ಅಧಿಕಾರಿ, ಸಿಬ್ಬಂದಿ ಕೆಲಸಕ್ಕೆ ಗೈರುಹಾಜರಾಗುತ್ತಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಲಿದೆ.
ಕರ್ನಾಟಕ ಸಚಿವಾಲಯ ನೌಕರರ ಸಂಘ, ಅರಣ್ಯ ಇಲಾಖೆಯ ನೌಕರರು, ವಿವಿಧ ನಿಗಮ ಮಂಡಳಿಗಳ ನೌಕರರೂ ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ. ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿನ ವಾಹನಗಳ ನೋಂದಣಿ, ಪರವಾನಗಿ ವಿತರಣೆ ಕಾರ್ಯಗಳೂ
ಸ್ಥಗಿತಗೊಳ್ಳಲಿವೆ. ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆಯ ಸೇವೆಗಳು ಎಂದಿನಂತೆ ದೊರಕಲಿವೆ. 

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿಯನ್ನು ಮಾ.1ರಿಂದಲೇ ನಡೆಸಲಿದ್ದಾರೆ. ಆದರೆ, ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ವಿಶ್ವವಿದ್ಯಾಲಯಗಳಲ್ಲಿ ನಿತ್ಯದಂತೆ ಪಾಠಗಳು ನಡೆಯಲಿವೆ ಎಂದು ತಿಳಿದುಬಂದಿದೆ.
(ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.