ರಾಜಾಹುಲಿ ಯಡಿಯೂರಪ್ಪ ಅವರನ್ನ ಜೈಲಿಗೆ ಹಾಕಿದ್ದು ಬಿಜೆಪಿಗರು, ಸ್ಫೋ.ಟಕ ಸತ್ಯ ಬಿಚ್ಚಿಟ್ಟ ರೇಣುಕಾಚಾರ್ಯ

 | 
Vf

ಕರ್ನಾಟಕ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ಶೀಘ್ರದಲ್ಲೇ ರಾಜ್ಯ ಬಿಜೆಪಿ ಮುಕ್ತವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲುಂಡ ಬಳಿಕ ನಿರಂತರವಾಗಿ ಪಕ್ಷದ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರೇಣುಕಾಚಾರ್ಯ ಅವರು ಬಿಜೆಪಿ ಸಭೆಗೆ ಗೈರಾಗಿ, ಇದೇ ಸಮಯದಲ್ಲಿ ಕಾಂಗ್ರೆಸ್​ ಸಚಿವರನ್ನು ಭೇಟಿ ಮಾಡಿ ಸಭೆ ನಡೆಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ರೇಣುಕಾಚಾರ್ಯ ಅವರು, ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಯಿತು. ಇದರ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ. ಕರ್ನಾಟಕದಲ್ಲಿ ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ, ಇಂದು ನಮ್ಮ ಪಕ್ಷಕ್ಕೆ ಅದೇ ಪರಿಸ್ಥಿತಿ ಬಂದಿದೆ. ರಾಜ್ಯ ಬಿಜೆಪಿ ಮುಖ್ಯವಾಗಲಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗಳಿಗೆ ಗೈರಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ನಾನು ಹೋಗಿಲ್ಲ. ಆ ನೋಟಿಸ್ ವಾಪಸ್ ಪಡೆಯಬೇಕು ಅದಕ್ಕೆ ಸಭೆಗೆ ಹಾಜರಾಗ್ತಿಲ್ಲ. ನಾನು ಏನು ಹೇಳಬೇಕೊ ಅದನ್ನ ಹೇಳಿದ್ದೀನಿ. ಇದರಿಂದ ನನಗೆ ವೈಯಕ್ತಿಕವಾಗಿ  ಯಾವುದೇ ಲಾಭ ಇಲ್ಲಾ ನಷ್ಟನೂ ಇಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತರ ಅಪೇಕ್ಷೆಯಂತೆ ಇರುವುದನ್ನ ನೇರವಾಗಿ ಹೇಳಿದ್ದೀನಿ ಎಂದು ಹೇಳಿದ್ದಾರೆ. 

ಯಡಿಯೂರಪ್ಪ ಅವರಂತಹ ನಾಯಕರನ್ನ ಕಡೆಗಣಿಸಿದ್ದಾರೆ, ಇದು ಬಿಜೆಪಿಗೆ ಶಾಪವಾಗಿದೆ. ವರ್ಚಸ್ಸು ಇರುವವರನ್ನ ಬೆಳೆಯೋಕೆ ಬಿಡ್ತಿಲ್ಲ. ವಿಜಯೇಂದ್ರ ಅಂತಹವರನ್ನ ಮೂಲೆಗುಂಪು ಮಾಡ್ತಿದ್ದಾರೆ. ನಾನು ನೇರವಾಗಿಯೇ ಮಾತನಾಡಿದ್ದೇನೆ. ಅದಕ್ಕೆ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ. ನಾನು ಪಕ್ಷ, ಮೋದಿ, ನಡ್ಡಾ, ಅಮಿತ್ ಶಾ ವಿರುದ್ಧ ಮಾತನಾಡಿಲ್ಲ. ನಾನು ಮಾತಾಡಿರೋದು ಕೆಲ ವ್ಯಕ್ತಿಗಳ ದೌರ್ಬಲ್ಯವನ್ನ ಅಷ್ಟೇ. ಅದನ್ನ ನೇರವಾಗಿ ಖಂಡಿಸಿದ್ದೇನೆ ಎಂದು ಗುಡುಗಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.