ಚಿಕ್ಕಣ್ಣ ಅವರಿಗೆ ಅವತ್ತು ನೋಟಿಸ್ ಕೊಟ್ಟಿದ್ದು ಇದೇ ಕಾರಣಕ್ಕೆ;
Aug 24, 2024, 21:28 IST
|
ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ 17 ಮಂದಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ನಡುವೆ ನಟ ಚಿಕ್ಕಣ್ಣ ಅವರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಹೋಗಿ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಅವರನ್ನು ಭೇಟಿ ಮಾಡಿಕೊಂಡು ಬಂದಿದ್ದಾರೆ. ಅದೇ ಈಗ ಚಿಕ್ಕಣ್ಣಗೆ ಹೊಸ ಸಂಕಷ್ಟವನ್ನು ತಂದೊಡ್ಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದು, ಚಿಕ್ಕಣ್ಣಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಲಿದೆ.
ರೇಣುಕಾಸ್ವಾಮಿ ಕೊಲೆಗೂ ಮುನ್ನ ಜೂನ್ 8ರಂದು ದರ್ಶನ್ ಮತ್ತು ಪ್ರಕರಣದ ಇತರೆ ಆರೋಪಿಗಳು ಆರ್‌ಆರ್ ನಗರದ ಸ್ಟೋನಿ ಬ್ರೂಕ್ ಪಬ್‌ನಲ್ಲಿ ಪಾರ್ಟಿ ಮಾಡಿದ್ದರು. ನಟ ಚಿಕ್ಕಣ್ಣ ಸಹ ಆ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಈ ಹಿಂದೆಯೇ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಅಲ್ಲದೆ, ಚಿಕ್ಕಣ್ಣ ಅವರು ನ್ಯಾಯಾಧೀಶರ ಎದುರು ಸಿಆರ್‌ಪಿಸಿ 164ರ ಅಡಿ ಹೇಳಿಕೆ ದಾಖಲಿಸಿದ್ದರು.
ನಟ ದರ್ಶನ್ ತೂಗುದೀಪ ಮತ್ತು ಇತರೆ ಆರೋಪಿಗಳ ವಿರುದ್ಧ ಚಿಕ್ಕಣ್ಣ ಹೇಳಿಕೆಯನ್ನು ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲೆಂದೇ ಪೊಲೀಸರು ನ್ಯಾಯಾಧೀಶರ ಎದುರು ಹೇಳಿಕೆ ದಾಖಲು ಮಾಡಿದ್ದರು. ಮುಂದೆ ಚಿಕ್ಕಣ್ಣ ಏನಾದರೂ ತಮ್ಮ ಹೇಳಿಕೆ ಬದಲಿಸಿದರೆ ವಿಚಾರಣೆಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೇ ಪಡೆದುಕೊಳ್ಳಲಾಗಿತ್ತು.
ನಂತರ ನಡೆದ ಬೆಳವಣಿಗೆಯಲ್ಲಿ ಚಿಕ್ಕಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಹೋಗಿ ಆರೋಪಿ ದರ್ಶನ್‌ರನ್ನು ಭೇಟಿಯಾಗಿದ್ದರು. ಸಾಮಾನ್ಯವಾಗಿ ಪ್ರಕರಣವು ತನಿಖಾ ಹಂತದಲ್ಲಿರುವಾಗ ಸಾಕ್ಷಿಯಾದ ವ್ಯಕ್ತಿಯು ಜೈಲಿನಲ್ಲಿ ಆರೋಪಿಯನ್ನು ಭೇಟಿ ಮಾಡುವುದಿಲ್ಲ.
ಆದರೆ, ರೇಣುಕಾಸ್ವಾಮಿ ಕೊಲೆ ಪ್ರಕರಣವು ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ಅವರು ದರ್ಶನ್‌ರನ್ನು ಭೇಟಿ ಮಾಡಿದ್ದರು. ಹೀಗಾಗಿ, ಪೊಲೀಸರು ಚಿಕ್ಕಣ್ಣಗೆ ನೋಟಿಸ್ ನೀಡಿ ವಿಚಾರಣೆ ಮಾಡಲಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.