ಜಯದೇವ ಆಸ್ಪತ್ರೆ ಡಾಕ್ಟರ್ ಮಂಜುನಾಥ್ ನಿವೃತ್ತಿ, ಇನ್ನುಮುಂದೆ ಬಡವರ ಪರಿಸ್ಥಿತಿ ಏನಾಗಲಿದೆ ಗೊ.ತ್ತಾ

 | 
ರಕದ

ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಟ್ಸ್ ಎಂಬ ಧ್ಯೇಯದೊಂದಿಗೆ ಜನಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚಿನ ಮನ್ನಣೆ ಪಡೆದಿದ್ದ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ  ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ನಿನ್ನೆ ಸೇವೆಯಿಂದ ನಿವೃತ್ತರಾದರು.ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 

ಅವರ ಅವಧಿಯಲ್ಲಿ ವಿಶ್ವದ ಭೂಪಟದಲ್ಲಿ ಗುರುತಿಸುವ ಮಟ್ಟಕ್ಕೆ ಜಯದೇವ ಆಸ್ಪತ್ರೆ ಖ್ಯಾತಿ ಪಡೆದಿದೆ. ಸುಮಾರು 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಆಸ್ಪತ್ರೆ ದಾಖಲೆ ನಿರ್ಮಿಸಿದೆ.
ಪಕ್ಷಾತೀತವಾಗಿ ಮಂಜುನಾಥ್ ಅವರ ಸೇವೆಯನ್ನು ಪ್ರಶಂಸಿಸಲಾಗುತ್ತದೆ. ನಿರಂತರವಾಗಿ ಅಭಿವೃದ್ಧಿ ಹೊಂದಿದ ಆಸ್ಪತ್ರೆಯು ರೋಗಿಗಳ ಪಾಲಿನ ಸಂಜೀವಿನಿಯಾಗಿದೆ. ಬಡವ-ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕೆ ಸರ್ಕಾರಿ ಆಸ್ಪತ್ರೆ ಹೆಸರಾಗಿದೆ. 

ಭಾರತದ ಯಾವುದೇ ಆಸ್ಪತ್ರೆಯಲ್ಲಿ ಇಲ್ಲದಷ್ಟು 125 ಹೃದ್ರೋಗ ತಜ್ಞರು ಜಯದೇವ ಆಸ್ಪತ್ರೆಯಲಿದ್ದಾರೆ. 2022ರ ಅಧ್ಯಯನದಲ್ಲಿ ಟಾಪ್ 5 ಸೆಂಟರ್ಗಳ ಪೈಕಿ ನಂಬರ್ 1 ಸ್ಥಾನದಲ್ಲಿ ಜಯದೇವ ಆಸ್ಪತ್ರೆ ಇದೆ. 300 ಹಾಸಿಗೆ ಸಾಮಥ್ರ್ಯವಿದ್ದ ಆಸ್ಪತ್ರೆಯು ಮಂಜುನಾಥ್ ಅವರ ಆಡಳಿತ ಅವಧಿಯಲ್ಲಿ 2 ಸಾವಿರ ಹಾಸಿಗೆ ಸಾಮಥ್ರ್ಯಕ್ಕೆ ಹೆಚ್ಚಳವಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತಿ ದೊಡ್ಡ ಹೃದ್ರೋಗ ಸಂಸ್ಥೆಯಾಗಿದೆ. ಕಳೆದ ಮೇ ತಿಂಗಳಲ್ಲಿ ಕೇಂದ್ರೀಯ ಸಂಸದೀಯ ಸಂಸ್ಥೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಇಲ್ಲಿನ ಚಿಕಿತ್ಸೆ ಕಂಡು ದೇಶದ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಜಯದೇವ ಆಸ್ಪತ್ರೆ ಮಾದರಿ ಅಂದಿತ್ತು. 

ಜಯದೇವ ಹೃದ್ರೋಗ ಸಂಸ್ಥೆ ಮೈಸೂರಲ್ಲಿ ನಿರ್ಮಾಣಗೊಂಡಿದೆ. ಬೆಂಗಳೂರು ಮಧ್ಯಭಾಗ ಮಲ್ಲೇಶ್ವರದಲ್ಲೂ ಸ್ಯಾಟಲೈಟ್ ಸೆಂಟರ್ ತೆರೆದಿದ್ದೇವೆ. ಇಎಸ್ಐ ಆಸ್ಪತ್ರೆಯಲ್ಲೂ ಶಾಖೆಯನ್ನು ತೆರೆದಿದೆ. ಕಲ್ಯಾಣ ಕರ್ನಾಟಕದಲ್ಲಿ 135 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಕಾಮಗಾರಿ ಶೇ. 85ರಷ್ಟು ಪೂರ್ಣಗೊಂಡಿದ್ದು, ಏಪ್ರಿಲ್ನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಸೇವಾ ನಿವೃತ್ತಿಯಾದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆ ಸಿಬ್ಬಂದಿಯಿಂದ ನಿನ್ನೆ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದಿಸಿದರು. 

ಈ ವೇಳೆ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ ಅವರು, ಜಯದೇವ ಹೃದ್ರೋಗ ಆಸ್ಪತ್ರೆ ಜನರ ಆಸ್ಪತ್ರೆಯಾಗಿದೆ. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಈ ಆಸ್ಪತ್ರೆ ಸೇವೆ ಸಲ್ಲಿಸುತ್ತಿದೆ. ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳೆಸಲಾಗಿದೆ. ಸರ್ಕಾರ ಮತ್ತು ದಾನಿಗಳ ಸಹಕಾರದಿಂದ ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ ಎಂದು ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.