ಅದೇ ಜಾಗವನ್ನು ಹೆಚ್ಚಾಗಿ ಮುಟ್ಟುತ್ತಿದ್ದ ಕಾ.ಮುಕ, ರೊಚ್ಚಿಗೆದ್ದ ಮುದ್ದಾದ ಯುವತಿಯರು

 | 
Ngf

ಹುಣಸೆ ಮುಪ್ಪಾದರೂ ಹುಳಿ ಮುಪ್ಪಗದು ಎನ್ನುವಂತೆ ವಯಸ್ಸಾದ ವ್ಯಕ್ತಿಯೊಬ್ಬ ಲುಲು ಮಾಲ್​ನಲ್ಲಿ  ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ವೈರಲ್ ಆಗಿದ್ದು ನೋಡುಗರನ್ನು ಸಿಟ್ಟಿಗೆಳುವಂತೆ ಮಾಡಿದೆ. ಹೌದು ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ. 

ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಮಹಿಳೆಯ ಹಿಂಬದಿಯಲ್ಲಿ ಆಕೆಯನ್ನು ಅಶ್ಲೀಲ ವಾಗಿ ಮುಟ್ಟಿದ್ದಾನೆ. ಬಳಿಕ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಪರಾರಿಯಾಗಿದ್ದಾನೆ. ಈ ವಿಡಿಯೋ ಗ್ರಾಹಕರೊಬ್ಬರ ಮೊಬೈಲ್​ನಲ್ಲಿ ಸೆರೆಯಾಗಿದ್ದು, yesh_fitspiration ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದೆ. ಇದರ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಇನ್ನು ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿರುವ ವಿಚಾರ ಟಿವಿಗಳ ಮೂಲಕ ಗೊತ್ತಾಗಿ ಲುಲು ಮಾಲ್​ ಅಧಿಕಾರಿ ಇದೀಗ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಾಗಡಿ ರಸ್ತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ವಿಡಿಯೋ ‌ಆಧಾರದ ಮೇಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಗದ್ದಲ ಇರುವ ಕಡೆ ಈ ವ್ಯಕ್ತಿ ಮಹಿಳೆಯರು ಹಾಗೂ ಯುವತಿಯರ ಹಿಂದೆ ಓಡಾಡುತ್ತಿದ್ದ. ಇದನ್ನು ಗಮನಿಸಿ ಆತನನ್ನು ಫಾಲೋ ಮಾಡಿದೆ. ಬಳಿಕ ಈ ಘಟನೆ ಬಗ್ಗೆ ಸೆಕ್ಯೂರಿಟಿ ಗಾರ್ಡ್ ಹಾಗೂ ಮಾಲ್ ಮ್ಯಾನೇಜ್​ಮೆಂಟ್​ ಗಮನಕ್ಕೆ ತಂದಿದ್ದೇನೆ. ನಂತರ ಆತನನ್ನು ಸೆಕ್ಯೂರಿಟಿ ಗಾರ್ಡ್ ಹುಡುಕಾಡಿದ್ದಾರೆ. ಆದ್ರೆ, ಆ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ಈ  ವೀಡಿಯೊ ಸೋಷಿಯಲ್ ಮೀಡಿಯಾ ಅಲ್ಲಿ ಪೋಸ್ಟ್ ಮಾಡಿ ಬರೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.