ಕನ್ನಡದ ಪ್ರಖ್ಯಾತ ನಟಿ ಹೃ ದಯಾಘಾತಕ್ಕೆ ಬಲಿ, ಒಡೋಡಿ ಬಂದ ದರ್ಶನ್ ಸುದೀಪ್ ಯಶ್

 | 
S
ಪುನೀತ್ ರಾಜ್‌ಕುಮಾರ್ ಅವರೊಂದಿಗೆ ‘ಹುಡುಗರು’ ಚಿತ್ರದಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ ಅವರು 42ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ಮರಣವು ಅಭಿಮಾನಿಗಳಲ್ಲಿ ಮತ್ತು ಚಲನಚಿತ್ರ ರಂಗದಲ್ಲಿ ಆಘಾತ ಹಾಗೂ ದುಃಖವನ್ನುಂಟು ಮಾಡಿದೆ. ಮರಣೋತ್ತರ ಪರೀಕ್ಷೆಗಾಗಿ ಅವರ ದೇಹವನ್ನು ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಪುನೀತ್ ರಾಜ್​ಕುಮಾರ್ ಜೊತೆ ನಾ ಬೋರ್ಡು ಇರದ ಬಸ್ಸನು..ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು.
 ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ ಹೊಂದಿದ್ದರು. ಪ್ರಸ್ತುತ, ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.ಶೆಫಾಲಿ ಜನಿಸಿದ್ದು 1982ರ ಡಿಸೆಂಬರ್ 15ರಂದು. ಅವರು ಮುಂಬೈನಲ್ಲಿ ಹುಟ್ಟಿ, ಬೆಳೆದರು. 2004ರಲ್ಲಿ ಅವರು ಹರ್ಮೀತ್ ಸಿಂಗ್​ನ ವಿವಾಹ ಆದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇವರು ವಿಚ್ಛೇದನ ಪಡೆದರು. 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ವಿವಾಹ ಆದರು. ಎರಡನೇ ಪತಿಯ ಜೊತೆ ಇನ್ನೂ ಅವರು ಸಂಸಾರ ನಡೆಸುತ್ತಿದ್ದರು.
2004ರ ಕಾಂಟಾ ಲಗಾ.. ಹಾಡಿನಲ್ಲಿ ಶೆಫಾಲಿ ಭರ್ಜರಿ ಡ್ಯಾನ್ಸ್ ಮಾಡಿದ್ದರು. 2011ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಅವರು ‘ಪಂಕಜಾ..’ ಹಾಡಿಗೆ ಮಸ್ತ್ ಆಗಿ ಸ್ಟೆಪ್ ಹಾಕಿದ್ದರು. 2019ರಲ್ಲಿ ಆರಂಭ ಆದ ‘ಬಿಗ್ ಬಾಸ್ ಸೀಸನ್ 13’ರಲ್ಲಿ ಪಂಕಜಾ ಸ್ಪರ್ಧಿಸಿದರು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ಶಾಕಿಂಗ್ ವಿಚಾರ ಎಂದರೆ ಅವರ ಜೊತೆ ನಟಿಸಿದ ಪುನೀತ್ ಹಾಗೂ ಅವರ ಜೊತೆ ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿ ಗೆದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದಲೇ ನಿಧನ ಹೊಂದಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub