ಕನ್ನಡದ ಸ್ಟಾರ್ ದಿಗ್ಗಜರಿಗೆ ಬಂಧನ ಭೀತಿ, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ಯಾಕೆ ಗೊತ್ತಾ

 | 
ರುಿ

 ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎನ್ನುವ ಕಾರಣ್ಕಕಾಗಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮೊನ್ನೆಯಷ್ಟೇ ಬಂಧನವಾಗಿದ್ದಾರೆ. ಅವರನ್ನು ಜೈಲಿಗೂ ಕಳುಹಿಸಿ ಆಗಿದೆ. ಸಂತೋಷ್ ಬಂಧನದ ಬೆನ್ನಲ್ಲೇ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳೂ ಹುಲಿ  ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ದೇವಸ್ಥಾನವೊಂದರ ಸ್ಥಳದಲ್ಲಿ ನಿಂತು ತೆಗೆದಿರುವ ದರ್ಶನ್  ಅವರ ಫೋಟೋದಲ್ಲಿ ಅವರು ಹುಲಿ ಉಗುರು ಧರಿಸಿದ್ದಾರೆ. ಅಲ್ಲದೇ, ನಿಖಿಲ್ ಮದುವೆ ಸಂದರ್ಭದಲ್ಲಿ ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡಿದ್ದಾರೆ. ನಟ ಜಗ್ಗೇಶ್  ಸಂದರ್ಶನವೊಂದರಲ್ಲಿ ಸ್ವತಃ ಅವರೇ ಹುಲಿ ಉಗುರಿನ ಪೆಂಡೆಂಟ್ ತೋರಿಸುತ್ತಾ, ಇದನ್ನು ನನ್ನ ತಾಯಿ ಕೊಟ್ಟಿದ್ದಾರೆ. ಮಗ ಹುಲಿಯಂತೆ ಇರಲಿ ಎನ್ನುವ ಮಾತುಗಳನ್ನು ಹೇಳಿದ್ದಾರೆ.

ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು ಅಲ್ಲದೇ, ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಎಲ್ಲರಿಗೂ ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವರ್ತೂರ್ ಸಂತೋಷ್ ಒಬ್ಬರೇನಾ ನಿಮಗೆ‌ ಕಾಣಿಸೋದು. ಹುಲಿ ಉಗುರು ಹಾಕಿಕೊಂಡಿರೋ ಜಗ್ಗೇಶ್, ದರ್ಶನ್, ನಿಖಿಲ್ ನಿಮ್ಮ ಕಣ್ಣಿಗೆ ಕಾಣಿಸಲ್ವಾ. ನೀವು ಕೂಡಲೇ ಕ್ರಮ ಕೈಗೊಳ್ಳದಿದ್ರೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವರನ್ನು ಭೇಟಿ ಮಾಡಿ ದೂರು ನೀಡ್ತಿವಿ ಎಂದು ದೂರುದಾರರು ಕಿಡಿಕಾರಿದ್ದಾರೆ.


( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.