Phone pay ಡಿಲೀಟ್ ಮಾಡುತ್ತಿರುವ ಕನ್ನಡಿಗರು; ಕರ್ನಾಟಕದ ಜನರ ಬಗ್ಗೆ ಅಪಹಾಸ್ಯ

 | 
He

ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ವಿಧೇಯಕ ಮಂಡನೆ ನಡೆಸಲು ಸಜ್ಜಾಗಿದ್ದ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳು ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿ, ವಿರೋಧಿಸಿದ ಕೈಗಾರಿಕೋದ್ಯಮಿಗಳ ವಿರುದ್ಧ ಆಕ್ರೋಶ ಹೊರ ಹಾಕಿತು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, #Boycott ಅಭಿಯಾನ ಆರಂಭಿಸಿವೆ.ಹೌದು.. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ  ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಸರ್ಕಾರದ ಮೀಸಲಾತಿ ಕಾಯ್ದೆ ವಿಚಾರವಾಗಿ ಈ ಹಿಂದೆ ಟ್ವೀಟ್ ಮಾಡಿದ್ದ ಸಮೀರ್ ನಿಗಮ್, ''ನನಗೆ 46 ವರ್ಷ. 15ಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದೇ ರಾಜ್ಯದಲ್ಲಿ ಎಂದಿಗೂ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ದೇಶದಾದ್ಯಂತ ಪೋಸ್ಟ್ ಮಾಡಲಾಗಿದೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?
ನಾನು ಕಂಪನಿಗಳನ್ನು ನಿರ್ಮಿಸಿದ್ದು, ಭಾರತದಾದ್ಯಂತ 25000+ ಉದ್ಯೋಗಗಳನ್ನು ಸೃಷ್ಟಿಸಿದೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಎಂದು ಹೇಳುವ ಮೂಲಕ ಉದ್ಯೋಗ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದರು.

ಇದರ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದ್ದು, ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಸಿದ್ದರಾಮಯ್ಯ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.