ರಾಜ್ಯದ ಹುಲಿಯಂತ ನಾಯಕರನ್ನು ಭೇಟಿಯಾದ ಕಾರ್ತಿಕ್, ಬಿಗ್ ಬಾಸ್ ಟ್ರೋಫಿ ನೋಡಿ ಫಿದಾ ಆದ CM ಹಾಗೂ DCM
ಬಿಗ್ ಬಾಸ್ ಕನ್ನಡ ಸೀಸನ್ 10 ವಿನ್ ಆಗುವ ಮೂಲಕ ಕಾರ್ತಿಕ್ ಮಹೇಶ್ ಖ್ಯಾತಿ ಹೆಚ್ಚಾಗಿದೆ. ಅವರು ನಾನಾ ಕಡೆಗಳಿಗೆ ತೆರಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಕೇವಲ ಸಾಮಾನ್ಯರನ್ನು ಮಾತ್ರವಲ್ಲ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ನಿವಾಸದಲ್ಲಿ ಈ ಭೇಟಿ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ತಿಕ್ ಅವರಿಗೆ ಶುಭ ಹಾರೈಸಿದ್ದಾರೆ. ಇದರಿಂದ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.
ಬಿಗ್ ಬಾಸ್ನಿಂದ ಕಾರ್ತಿಕ್ ಮಹೇಶ್ಗೆ ಸಿಕ್ಕ ಜನಪ್ರಿಯತೆ ತುಂಬಾನೇ ದೊಡ್ಡದು. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿರುವ ಅವರು ‘ಬಿಗ್ ಬಾಸ್’ಗೆ ಬಂದರು. ಇಲ್ಲಿ ಆಟ ಹಾಗೂ ಮನರಂಜನೆ ಮೂಲಕ ಎಲ್ಲರ ಗಮನ ಸೆಳೆದರು. ಅವರು ಕಪ್ ಗೆದ್ದಿದ್ದಾರೆ. ಹೀಗಾಗಿ ಅವರು ನಾನಾ ಸೆಲೆಬ್ರಿಟಿಗಳನ್ನು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾರ್ತಿಕ್ ಆಶೀರ್ವಾದ ಪಡೆದಿದ್ದಾರೆ. ಒಳ್ಳೆದಾಗಲಿ ಕಣಯ್ಯ. ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಮಾಡು ಎಂದು ಹಾರೈಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಾ ಸೂಪರ್ ಕಣಯ್ಯ ಎಂದು ಹಾರೈಸಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮ ಹರೀಶ್. ಮತ್ತು ಉಲ್ಲಾಸ್ ಗೌಡ ಉಪಸ್ಥಿತರಿದ್ದರು.
ಕಾರ್ತಿಕ್ ಮಹೇಶ್ ಅವರು ಈ ಮೊದಲು ‘ಡೊಳ್ಳು’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಅವರು ತಮ್ಮ ಅಸಲಿ ಆಟ ತೋರಿಸಿದ್ದಾರೆ. ಅವರನ್ನು ಇನ್ಸ್ಟಾಗ್ರಾಮ್ನಲ್ಲಿ 4.6 ಲಕ್ಷ ಜನರು ಹಿಂಬಾಲಿಸುತ್ತಾರೆ. ಅವರಿಗೆ ಬಿಗ್ ಬಾಸ್ ಗೆದ್ದಿದ್ದಕ್ಕೆ 50 ಲಕ್ಷ ರೂಪಾಯಿ ಜೊತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಕಾರು ಉಡುಗೊರೆಯಾಗಿ ಸಿಕ್ಕಿತ್ತು. ಇತ್ತೀಚೆಗೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.