ಗಂಡು ಮಗನಿಗೆ ಜನ್ಮ ಕೊಟ್ಟ ಕವಿತಾ ಗೌಡ, ಮಗು ಯಾರ ರೀತಿ ಇದೆ ಗೊತ್ತಾ

 | 
He
 ಲಕ್ಷ್ಮಿ ಬಾರಮ್ಮ ಧಾರಾವಾಹಿ ಖ್ಯಾತಿಯ ಕವಿತಾ ಗೌಡ ಮತ್ತು ಚಂದನ್‌ ದಂಪತಿಗೆ ಗಂಡು ಮಗು ಜನಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಂದನ್‌ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಎಂದು ಬರೆದುಕೊಂಡು, ಗಂಡು  ಮಗು ಜನಿಸಿರುವ ಖುಷಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮ ಧಾರಾವಾಹಿಯಲ್ಲಿ ಇಬ್ಬರೂ ನಟಿಸಿದ್ದರು. ಇಬ್ಬರೂ ಪ್ರೀತಿಸಿ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದರು. ಕೆಲ ತಿಂಗಳ ಹಿಂದ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಅಲ್ಲದೆ ಅದ್ಧೂರಿಯಾಗಿ ಸೀಮಂತ ಮಾಡಿಕೊಂಡ ಫೋಟೊಗಳನ್ನೂ ಹಂಚಿಕೊಂಡಿದ್ದರು. ಇದೀಗ ಮೊದಲ ಮಗುವನ್ನು ಜೋಡಿ ಬರಮಾಡಿಕೊಂಡಿದ್ದಾರೆ.
ನಟಿ ಕವಿತಾ ಗೌಡ ಅವರ ಸೀಮಂತ ಅದ್ಧೂರಿಯಾಗಿಯೇ ನಡೆದಿತ್ತು. ಒಂದು ಮದುವೆ ಸಂಭ್ರಮದ ರೀತಿನೇ ಆಗಿತ್ತು. ಈ ಸೀಮಂತದ ಫೋಟೋಗಳು ಕೂಡ ಹೆಚ್ಚು ಗಮನ ಸೆಳೆದಿದ್ದರು. ಇದಕ್ಕೂ ಮೊದಲು ಚಂದನ್ ಮತ್ತು ಕವಿತಾ ಅವರ ವಿಶೇಷ ಫೋಟೋ ಶೂಟ್ ಕೂಡ ಹೆಚ್ಚು ಇಂಟ್ರಸ್ಟಿಂಗ್ ಆಗಿಯೇ ಕಾಣಿಸಿಕೊಂಡಿದ್ದವು
ಕಳೆದ ಕೆಲ ದಿನಗಳಿಂದ ಲಕ್ಷ್ಮಿಬಾರಮ್ಮ ಸೀರಿಯಲ್ ಖ್ಯಾತಿಯ ನಟಿ ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ಇತ್ತೀಚಿಗೆ ಕವಿತಾ ಗೌಡ ಸೀಮಂತ ಕೂಡ ಅದ್ಧೂರಿಯಾಗಿಯೇ ನಡೆದಿತ್ತು. ಈಗ ಕವಿತಾ ಗೌಡ ತಮ್ಮ ಮೊದಲ ಮಗುವಿಗೆ ಜನ್ಮ ಕೊಟ್ಟಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.