ಹೊರಬಿತ್ತಾ ಕಿಚ್ಚ ಸುದೀಪ್ ಖಾಸಗಿ ವಿಡಿಯೋ? ಸಾಮಾಜಿಕ ಜಾಲತಾಣದಲ್ಲಿ ವೈರಲ್

ನಟರೆಂದರೆ ದೇವರುಗಳಂತೆ ಪೂಜಿಸುತ್ತಾರೆ ಕೆಲವು ಅಭಿಮಾನಿಗಳು.ಹಾಗಾಗಿ ಒಮ್ಮೊಮ್ಮೆ ಅಭಿಮಾನಿಗಳ ಅಭಿಮಾನದ ಪರಾಕಾಷ್ಠೆ ಹೆಚ್ಚಾಗಿ ಇತರ ಹೀರೋಗಳನ್ನು ತೆಗಳುವುದು ಹಾಗೂ ಸಣ್ಣ ಪುಟ್ಟ ಗಲಾಟೆ ಮಾಡುವುದು ಸಾಮಾನ್ಯ.ಆದರೆ ಇತ್ತೀಚಿಗೆ ದರ್ಶನ್ ಅವರಿಗೆ ಚಪ್ಪಲಿ ಎಸೆದು ವಿಕೃತಿ ಮೆರೆದಂತೆ ಈಗ ನಟ ಸುದೀಪ್ ಗೆ ಬೆದರಿಕೆಯ ಪತ್ರವನ್ನು ಕಳಿಸಿದ್ದಾರೆ ಎನ್ನಲಾಗುತ್ತಿದೆ.
ಹೌದು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದೆ ಎನ್ನಲಾಗಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದೆ. ಇದರಿಂದ ಸುದೀಪ್ಗೆ ಮಾನಸಿಕ ಕಿರುಕುಳ ಆಗಿದೆ. ನಟನ ಘನತೆಗೆ ಧಕ್ಕೆ ತರಲು ಮಾಡಿರೋ ಸಂಚು ಎಂದು ಮಂಜು ಅವರು ದೂರಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.
ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ಸಿಸಿಬಿಗೆ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಲವರು ಕೆಲವು ವಿಧವಾಗಿ ಕಾಮೆಂಟ್ ಮಾಡಿದ್ದು ಕೆಲವರು ಸುದೀಪ್ ಬಿಜೆಪಿಗೆ ಸೇರುತ್ತಿರುವುದರಿಂದಲೇ ಈ ಪತ್ರ ಬಂದಿದೆ ಎನ್ನುತ್ತಿದ್ದಾರೆ. ಇದರಲ್ಲಿ ಕಿಚ್ಚ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬಹಳ ಕೆಟ್ಟದ್ದಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.
ಈ ಸಂಬಂಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಪತ್ರ ಕಳುಹಿಸಿದ್ದು ಯಾರು ಎನ್ನುವ ಹುಡುಕಾಟ ನಡೆಯುತ್ತಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.