ದರ್ಶನ್ ಹುಟ್ಟಿದ ಹಬ್ಬಕ್ಕೆ ವಿಶ್ ಮಾಡಿದ ಕಿಚ್ಚ ಸುದೀಪ್, ಕುಚಿಕು ಗೆಳೆಯನನ್ನು ಹಾಡಿ ಹೊಗಳಿದ ಕಿಚ್ಚ

 | 
ರಹ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಕರುನಾಡ ಕಲಾರತ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಧ್ಯೆ ಎಲ್ಲವೂ ಸರಿಯಿಲ್ಲ, ಇವರಿಬ್ಬರ ಮಧ್ಯೆ ಮನಸ್ತಾಪ ಮೂಡಿದೆ, ಹಾಗೆ, ಹೀಗೆ ಅಂತ ಮಾತನಾಡಿಕೊಳ್ಳುತ್ತಿರುವವರಿಗೇನು ಕಮ್ಮಿಯಿಲ್ಲ.
ಆದರೆ ಇದೀಗ ದಾಸ'ನ ಜನುಮದಿನಕ್ಕೆ ತಮ್ಮ ಕುಚಿಕು ಗೆಳೆಯ ಕಿಚ್ಚ ಸುದೀಪ್ ವಿಶ್ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಶುಭಕೋರಿರುವ ಸುದೀಪ್ ದರ್ಶನ್ ಗೆ  ಹಾರೈಸಿದ್ದಾರೆ.ು


ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬ. 

ಆದ್ರೆ, ಅಭಿನಯ ಚಕ್ರವರ್ತಿ ಒಂದು ದಿನ ನಂತರ ಅಂದ್ರೆ, ಫೆಬ್ರವರಿ 17 ರಂದು ಟ್ವಿಟ್ಟರ್ ಮೂಲಕ ದರ್ಶನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಈಗಾಗಲೇ ಹೊಸಪೇಟೆಯಲ್ಲಿ ನಡೆದ ಘಟನೆಗೆ ದರ್ಶನ್ ವಿಚಾರದಲ್ಲಿ ಅವರ ಬಗ್ಗೆ ಪುನೀತ್ ಅಭಿಮಾನಿಗಳಿಗೆ ಬೇಸರ, ಅಸಮಾಧಾನ ಇರಬಹುದು. ಆದರೆ ಇಂತಹ ಪ್ರತಿಕ್ರಿಯೆ ನೀಡುವುದನ್ನು ಸ್ವತಃ ಪುನೀತ್ ಅವರೇ ಪ್ರೋತ್ಸಾಹಿಸುತ್ತಿದ್ದರೇ, ಪುನೀತ್ ಹೇಗಿದ್ದರು, ಅವರು ಹೇಗೆ ಬಾಳಿ ಬದುಕಿದ್ದರು ಎಂದು ಅವರ ಅಭಿಮಾನಿಗಳಿಗೆ ಚೆನ್ನಾಗಿ ಗೊತ್ತಿದೆ ಎಂದು ಭಾವಿಸುತ್ತೇನೆ. ಪ

ತುಂಬಿದ ಜನರ ಮಧ್ಯೆ ಒಬ್ಬರ ಕ್ಷುಲ್ಲಕ ನಡವಳಿಕೆ ಇಡೀ ವ್ಯವಸ್ಥೆಯನ್ನು ಹಾಳು ಮಾಡಬಾರದು, ಪ್ರೀತಿ, ಗೌರವ ಮತ್ತು ಘಟನೆಯನ್ನು ಎತ್ತಿ ತೋರಿಸುವ ಪುನೀತ್ ಅಭಿಮಾನಿಗಳು ಅದನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿರಬಹುದು. ದರ್ಶನ್ ಚಿತ್ರೋದ್ಯಮಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ನಡುವೆ ಭಿನ್ನಾಭಿಪ್ರಾಯವಿದೆ ಎಂದಾಕ್ಷಣ ನನ್ನ ಮನಸ್ಸಿಗೆ ತಟ್ಟಿದ ವಾಸ್ತವ ವಿಷಯಗಳ ಬಗ್ಗೆ ಮಾತನಾಡುವುದನ್ನು ನಾನೆಂದಿಗೂ ನಿಲ್ಲಿಸುವುದಿಲ್ಲ. ಪರ

ಚಪ್ಪಲಿ ಎಸೆಯುವಂತಹ ಕೃತ್ಯಗಳಿಗೆ ಖಂಡಿತಾ ದರ್ಶನ್ ಅರ್ಹರಲ್ಲ, ಈ ಘಟನೆ ನನ್ನ ಮನಸ್ಸನ್ನು ಘಾಸಿಗೊಳಿಸಿದೆ. ಎಂದು ಕಿಚ್ಚ ಸುದೀಪ್ ಪರ ಮಾತನಾಡಿ ದರ್ಶನ್ ಗೆ ತಮ್ಮ ಬೆಂಬಲವನ್ನು ನೀಡಿದ್ದರು. ಇದೀಗ ಹುಟ್ಟು ಹಬ್ಬಕ್ಕೆ ವಿಶ್ ಮಾಡಿ ಕುಚುಕು ಗೆಳೆತನವನ್ನು ಇನ್ನಷ್ಟು ಬಲಪಡಿಸಿಕೊಂಡಿದ್ದಾರೆ.

ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.

News Hub