ಭಾರತೀಯರಿಗೆ ಸಂತೋಷದ ಭವಿಷ್ಯ ನುಡಿದ ಕೋಡಿ ಶ್ರೀ, ಚಂದ್ರಯಾನ್ 3 ಏನಾಗುತ್ತೆ ಗೊತ್ತಾ

 | 
ಸಿ

 ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಚಂದ್ರಯಾನ-3 ಕುರಿತು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಜೊತೆಗೆ ಜಗತ್ತಿನ ಆಗು-ಹೋಗುಗಳ ಬಗ್ಗೆ ಭವಿಷ್ಯ ನುಡಿದಿದ್ದು ಸಾವು -ನೋವು ಹೆಚ್ಚಳವಾಗಲಿದೆ ಎಂದಿದ್ದಾರೆ. ಇನ್ನೂ ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಸ್ವಾಮೀಜಿ ಹೇಳಿದ್ದು, ಕುತೂಹಲ ಸೃಷ್ಟಿಸಿದೆ.

ಬೆಳಗಾವಿಯಲ್ಲಿ ಮಾತನಾಡಿರುವ ಶ್ರೀಗಳು, ವಿಷಾನೀಲ ಬೀಸುವ ಪ್ರಸಂಗವಿದ್ದು ಎಲ್ಲಾ ಕಡೆಯೂ ವ್ಯಾಪಿಸಲಿದೆ. ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟ್‌ಗಳ ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ಭೂಕಂಪಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ. ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗುತ್ತವೆ. ಆದರೆ, ದಕ್ಷಿಣ ಭಾರತದಲ್ಲಿ ಸಮೃದ್ಧಿಯ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ ಎಂದಿದ್ದಾರೆ.

ಚಂದ್ರಯಾನ-3 ಕುರಿತು ಭವಿಷ್ಯ ನುಡಿದಿರುವ ಕೋಡಿ ಶ್ರೀಗಳು ದೇಶದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಲಿದೆ, ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.
ಸದ್ಯ ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಇದೀಗ ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗಿದ್ದು ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಕೆಮಿಕಲ್ ಸಿಂಪಡಣೆಯಿಂದ ಫಲ ಸಿಗುತ್ತಿದೆ. ಇದರಿಂದ ಜನರು ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ತಿನ್ನುತ್ತಿದ್ದಾರೆ. ಹಾಗಿದ್ದಾಗ ಆರೋಗ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದ್ದೆ, ಮನುಷ್ಯ ಪ್ರಕೃತಿ ನಾಶ ಮಾಡುತ್ತಿದ್ದು, ಇದರ ದೋಷ ಮನುಕುಲಕ್ಕೆ ಇದೆ. ಈಗ ಎಲ್ಲೆಡೆ ಬೋರವೆಲ್ ತಲೆ ಎತ್ತಿವೆ. ಹೀಗಾಗಿ ಪ್ರಳಯ ಜಾಸ್ತಿ ಆಗುತ್ತಿವೆ ಎಂದು ಭವಿಷ್ಯ ನುಡಿದಿದ್ದಾರೆ.

ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.