ಭೂಕಂಪ ಸುನಾಮಿ ಬರುತ್ತದೆ, ಮತ್ತೊಂದು ‌ಬಾರಿ ಬೆಚ್ಚಿಬೀ.ಳುವ ಭವಿಷ್ಯ ನುಡಿದ ಕೋಡಿಶ್ರೀ

 | 
Hh

ಈ ಬಾರಿ ಚಂದ್ರಯಾನ-3 ಯಶಸ್ವಿಯಾಗಲಿದೆ ಎಂದು ಬೆಳಗಾವಿಯಲ್ಲಿ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚಂದ್ರಯಾನ 3 ಯಶಸ್ವಿಯಾಗಲಿದೆ. ಆದ್ರೆ ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನ, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ. 

ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. 

ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು. ಆದ್ರೆ ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ ಎಂದಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೆಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. 

ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು, ಪ್ರಾಕೃತಿಕ ದೋಷದಿಂದಲೇ ಸಾವುನೋವು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನ ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ ಹೆಚ್ಚಿತ್ತು, ಈಗ ಆಳವಾಗಿ ಬೋರ್‌ವೆಲ್‌ ಕೊರೆಸಬೇಕು.

ಹೀಗಾಗಿ ಪ್ರಳಯ ಜಾಸ್ತಿ ಆಗ್ತಿವೆ. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ, ಹೀಗಾಗಿ ಆಪತ್ತು ಹೆಚ್ಚಿವೆ. ಇದೆಲ್ಲದರ ನಿಯಂತ್ರಣಕ್ಕೆ ಭಗವಂತನಿದ್ದಾನೆ, ದೈವ, ನಂಬಿಕೆ ಮೇಲೆ ಜೀವನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.