ರಾಘು ಹೆಂಡತಿ ದಿಢೀರ್ ಸಾ.ವನ್ನಪ್ಪಿದ ವಿಚಾರ ಕೇಳಿ ಬೆಚ್ಚಿಬಿದ್ದ ಕುಮಾರಸ್ವಾಮಿ, ಹೇಳಿದ್ದೇನು ಗೊತ್ತಾ

 | 
Bbb

ಚಿನ್ನಾರಿ ಮುತ್ತುವಿನ ಮುತ್ತಾದ ಸ್ಪಂದನಾ ಇನ್ನಿಲ್ಲ. ಹೌದು
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ. 

ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದವರೂ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ ಎಂದಿದ್ದಾರೆ. ಮುಂದುವರಿದು ಮಾತನಾಡಿದ ಕುಮಾರಸ್ವಾಮಿ ಅವರು ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಇದರ ಮೂಲ ಹಿನ್ನೆಲೆ ಕೋವಿಡ್ ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗ್ತಿದೆ. 

ಪ್ರತಿಯೊಬ್ಬರೂ ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು ಎಂದರು.
ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಆ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ ಗೆ ತೆರಳಿದೆ. 

ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.