ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಸಿಗಲ್ವಾ, ಲಕ್ಷ್ಮಿ ಹೆಬ್ಬಾಳ್ಕರ್ ಖಡಕ್ ಸೂಚನೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಯೋಜನೆಗೆ ಚಾಲನೆ ಸಿಕ್ಕ 7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗಳು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ನೋಂದಣಿಗಾಗಿ SMS ಬರುವವರೆಗೂ ಕಾಯಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಯೋಜನೆಗೆ ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ, ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಆದರೆ ಇದೀಗ SMS ಅವಲಂಭಿಸದೇ ನೇರವಾಗಿ ನೋಂದಣಿ ಕೇಂದ್ರಗಳಿಗೆ ದಾಖಲಾತಿಗಳೊಂದಿಗೆ ತೆರಳಿ ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ, ಇದೇ ವೇಳೆ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಹಣ ಪಡೆದರೆ ಕ್ರಿಮಿನಸ್ ಕೇಸ್ ದಾಖಲಿಸಲಾಗುವುದು.
ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ನೀರಸ ಪ್ರತಿಕ್ರಿಯೆ ಹಿನ್ನೆಲೆ ಸರ್ಕಾರದಿಂದ ಪಾಲಿಕೆಗೆ ಸೂಚನೆ ನೀಡಲಾಗಿದ್ದು, ಕಾರ್ಯಕ್ರಮ ಯಶಸ್ವಿ ದೃಷ್ಟಿಯಿಂದ ಬೆಂಗಳೂರು ನೋಂದಣಿ ಹೊಣೆ ಬಿಬಿಎಂಪಿಗೆ ನೀಡಲಾಗಿದೆ. ಇನ್ನು ಗಂಡ ಟಾಕ್ಸ್ ಕಟ್ಟುತ್ತಿದ್ದರೆ. ಇಲ್ಲವೇ ಹೆಂಡತಿಯೇ ಟಾಕ್ಸ್ ಕಟ್ಟುತ್ತಿದ್ದರೆ ಅಂತಹವರಿಗೆ ಧನಲಕ್ಷ್ಮಿ ಯೋಜನೆ ನೀಡಲಾಗುವುದಿಲ್ಲ ಎಂದಿದ್ದಾರೆ.
ಬೆಂಗಳೂರು ಒನ್ ಸೇರಿದಂತೆ ನೋಂದಣಿ ಕೇಂದ್ರಗಳಲ್ಲಿ ಹಲವು ರೀತಿಯ ಸಮಸ್ಯೆಯಾಗುತ್ತಿದೆ. ಹೀಗಾಗಿ ಪಾಲಿಕೆಯ ಎಲ್ಲಾ ವಾರ್ಡ್ ಕಚೇರಿಗಳಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲು ಸೂಚನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿ ಮಾಡುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ಸೆಂಟರ್ ಓಪನ್ ಮಾಡಲು ಕಂದಾಯ ವಿಭಾಗದ ಉಪ ಆಯುಕ್ತರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲು ಸೂಚನೆ ನೀಡಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.