ನ ಟ ದರ್ಶನ್ ಕೈಯಲ್ಲಿ ಲಾಂಗ್, ಮತ್ತೆ ಸಂಕಷ್ಟಕ್ಕೆ ಸಿಲುಕಿದ್ರಾ ಚಾಲೆಂಜಿಂಗ್ ಸ್ಟಾರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ದರ್ಶನ್ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದ್ಯಾಕೋ ಗೊತ್ತಿಲ್ಲ ಇತ್ತೀಚಿನ ದಿನಗಳಲ್ಲಿ ನಟ ದರ್ಶನ್ ಭಾರೀ ಸುದ್ದಿಯಲ್ಲಿದ್ದಾರೆ. ಕಾವೇರಿ ಹೋರಾಟದ ವಿಚಾರದ ವೇಳೆ ದರ್ಶನ್ ಮಾತು ಕಿಡಿ ಹಚ್ಚಿತ್ತು.
ನಟ ದರ್ಶನ್ ಮನೆಯ ನಾಯಿ ಮಹಿಳೆ ಕಚ್ಚಿದ ಹಿನ್ನೆಲೆ ಕೇಸ್ ದಾಖಲಾಗಿತ್ತು ಆದರೆ ಇದೀಗ ಹೊಸ ಸಮಸ್ಯೆ ಎದುರಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕವಾಗಿ ಲಾಂಗ್ ಹಿಡಿಯುವ ಮೂಲಕ ಇದೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಹೌದು. ಸಾಮಾನ್ಯವಾಗಿ ನವೆಂಬರ್ ಪೂರ್ತಿ ರಾಜ್ಯೋತ್ಸವ ಕಾರ್ಯಕ್ರಮಗಳು ನಡೆಯುತ್ತವೆ. ಹೀಗೆ ಮಾಡುವಾಗ ಕಾರ್ಯಕ್ರಮಗಳಿಗೆ ಚಿತ್ರನಟರು, ಪ್ರಮುಖರನ್ನು ಆಯೋಜಕರು ಕರೆದು ಸನ್ಮಾನಿಸುವುದು ವಾಡಿಕೆ. ಅದೇ ರೀತಿ ಜಯನಗರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಕರೆಸಲಾಗಿತ್ತು,
ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಭರ್ಜರಿಯಾಗಿ ಸನ್ಮಾನಿಸಿದ್ದಾರೆ.
ಈ ವೇಳೆ ದರ್ಶನ್ ಮತ್ತು ಅಭಿಗೆ ಬೆಳ್ಳಿ ಕಿರೀಟ, ಲಾಂಗ್ ಉಡುಗೊರೆ ನೀಡಿದ್ದಾರೆ. ದರ್ಶನ್ ಲಾಂಗ್ ಹಿಡಿದು ಪೋಸ್ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟರು ಸಾರ್ವಜನಿಕವಾಗಿ ಈ ರೀತಿ ಲಾಂಗ್ ಹಿಡಿದು ಫೋಟೋಗೆ ಪೋಸ್ ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಹೇಳುವುದಾದರೆ ವಿವಾದಗಳೆಲ್ಲ ದಾಸನ ಹುಡುಕಿಕೊಂಡೇ ಬರುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.