ಮಹಾ ಯೋಗಿ ಸದ್ಗುರು ತಲೆಯಲ್ಲಿ ರಕ್ತಸ್ರಾವ; ಸ್ವಾಮಿಜಿ ತಲೆ ಒಳಗಡೆ ಏನಿತ್ತು ಗೊ.ತ್ತಾ ಡಾಕ್ಟರ್ ಶಾ ಕ್

 | 
Yio

ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬುಧವಾರ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ತಲೆಯಲ್ಲಿ ರಕ್ತಸ್ರಾವ ತಡೆಯಲು ಮಾರ್ಚ್ 17 ರಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆಯ ನಂತರ ಸದ್ಗುರು ವೆಂಟಿಲೇಟರ್‌ನಿಂದ ಹೊರ ಬಂದಿದ್ದಾರೆ. ಅವರ ಮೆದುಳು, ದೇಹ ಮತ್ತು ಪ್ರಮುಖ ಅಂಗಗಳು ಚೇತರಿಸಿಕೊಳ್ಳುತ್ತಿವೆ ಎಂದು ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆ ತಿಳಿಸಿದೆ.

66 ವರ್ಷದ ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್‌ನ ಸಂಸ್ಥಾಪ ಸದ್ಗುರು ಜಗ್ಗಿ ವಾಸುದೇವ್ ಅವರು ಪರಿಸರ ಸಂರಕ್ಷಣೆಗಾಗಿ 'ಮಣ್ಣು ಉಳಿಸಿ' ಮತ್ತು 'ನದಿಗಳನ್ನು ಉಳಿಸಿ' ಸೇರಿದಂತೆ ಹಲವು ಅಭಿಯಾನಗಳನ್ನು ಕೈಗೊಂಡಿದ್ದರು.ಕಳೆದ ನಾಲ್ಕು ವಾರಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರು, ತೀವ್ರ ನೋವಿನ ಹೊರತಾಗಿಯೂ, ಅವರು ತಮ್ಮ ಸಾಮಾನ್ಯ ದೈನಂದಿನ ಸಾಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರು ಮತ್ತು ಮಾರ್ಚ್ 8 ರಂದು ಮಹಾ ಶಿವರಾತ್ರಿ ಕಾರ್ಯಕ್ರಮವನ್ನು ಸಹ ನಡೆಸಿಕೊಟ್ಟಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರ ಹೊತ್ತಿಗೆ ತಲೆನೋವು ತೀವ್ರವಾದ ನಂತರ ಅವರು ಆಸ್ಪತ್ರೆಯ ಹಿರಿಯ ಸಲಹೆಗಾರ ನರರೋಗ ತಜ್ಞ ಡಾ ವಿನಿತ್ ಸೂರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಸೂರಿ ಅವರು ತಕ್ಷಣವೇ ಎಂಆರ್ ಐ ಮಾಡಿಸುವಂತೆ ಸಲಹೆ ನೀಡಿದ್ದಾರೆ. ಎಂಆರ್ ಐನಲ್ಲಿ ತಲೆಯಲ್ಲಿ ರಕ್ತಸ್ರಾವ ಆಗುತ್ತಿರುವುದು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಲೆನೋವು, ಕೈ-ಕಾಲುಗಳಲ್ಲಿ ಶಕ್ತಿ ಇಲ್ಲದಂತಾದ ಬಳಿಕ ಜಗ್ಗಿ ವಾಸುದೇವ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಮಾರ್ಚ್‌ 17ರಂದು ಅಪೋಲೊ ಆಸ್ಪತ್ರೆ ವೈದ್ಯರು ಮೆದುಳಿನ ತುರ್ತು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಡಾ.ವಿನೀತ್‌ ಸೂರಿ, ಡಾ.ಪ್ರಣವ್‌ ಕುಮಾರ್‌, ಡಾ.ಸುಧೀರ್‌ ತ್ಯಾಗಿ ಹಾಗೂ ಡಾ.ಎಸ್.‌ ಚಟರ್ಜಿ ಅವರು ಜಗ್ಗಿ ವಾಸುದೇವ್‌ ಅವರಿಗೆ ಸರ್ಜರಿ ಮಾಡಿದ್ದಾರೆ. ಈಗ ಸದ್ಗುರು ಅವರ ಆರೋಗ್ಯವು ಸುಧಾರಿಸಿದೆ ಎಂದು ತಿಳಿದುಬಂದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.