ಮಂಡ್ಯ ಗೌಡ್ತಿ ಕಾಂಗ್ರೆಸ್ ಕಡೆ ಮುಖ, ಉರಿದುಬಿದ್ದ ಕುಮಾರಣ್ಣ

 | 
B

ಚುನಾವಣೆಗೆ ಕೆಲವೇ ದಿನ ಇರುವುದರಿಂದ ಈಗ ಎಲ್ಲೆಡೆ ಇದೇ ಸುದ್ದಿಗಳು ಹರಿದಾಡುತ್ತಿವೆ. ಲೋಕಸಭೆ ಚುನಾವಣೆಗೆ ಈವರೆಗೂ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆಯಾಗಿಲ್ಲ. ಮುಂದೆ ಭೇಟಿ ಮಾಡುವ ಅವಶ್ಯಕತೆ ಬಂದರೆ ಸಂಸದೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದರು. 

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ? ಇಂತಹವರಿಗೆ ತೊಂದ್ರೆ ಕೊಟ್ಟು ನಿಲ್ಲಬೇಕು ಅಂತಾನೂ ಇದ್ದೀವಾ? ಖಂಡಿತಾ ಇಲ್ಲ. ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇವೆಲ್ಲಾ ಪ್ರಾರಂಭಿಕ ಹಂತದಲ್ಲಿ ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದರು.

ಇನ್ನು ತಾನು ಮಂಡ್ಯ ಕ್ಷೇತ್ರದಲ್ಲಿ ನಿಲ್ಲುವುದು ಪಕ್ಕಾ ಒಂದು ವೇಳೆ ಬಿಜೆಪಿ ನಾಯಕರು ಅದಕ್ಕೆ ಸಮ್ಮತಿಸಿದರೆ ಒಪ್ಪಿಗೆಯಿದೆ ಇಲ್ಲವಾದರೆ ಬೇರೆ ಪಕ್ಷದ ನಾಯಕರ ಜೊತೆ ಮಾತನಾಡುತ್ತೇನೆ ಎಂದಿರುವ ಸುಮಲತಾ ಅಂಬರೀಷ್ ಅವರು ಸುತ್ತಿ ಬಳಸಿ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನಬಹುದಾಗಿದೆ. ಈ ಬಗ್ಗೆ ಇಂದು ತಮ್ಮ ಹೇಳಿಕೆ ಪುನರುಚ್ಛರಿಸಿದ ಕುಮಾರಸ್ವಾಮಿ ಸುಮಲತಾ ಅವರೇನು ನನ್ನ ಶತ್ರುನಾ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಅವರನ್ನು ಭೇಟಿ ಮಾಡಿದರೆ ತಪ್ಪೇನಿದೆ ಎಂದು ಕೇಳಿದ್ದಾರೆ.

ಲೋಕಸಭೆ ಚುನಾವಣೆಗೆ ನಿಲ್ಲುವ ವಿಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು. 

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ಇಂಡಿಯಾದಲ್ಲಿ ಸದ್ದು ಮಾಡಿತ್ತು ಎಂದರೆ ತಪ್ಪಾಗಲಾರದು. ಕಾರಣ ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ನಿಂತಿದ್ದು ಮತ್ತು ಅವರ ಮುಂದೆ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಕಣಕ್ಕಿಳಿದಿದ್ದರು.

ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಗೆದ್ದ ನಂತರ ಸೋಲಿನ ಹತಾಶೆಯಲ್ಲಿ ಜೆಡಿಎಸ್ ದಳಪತಿಗಳು ಹಲವು ಆರೋಪಗಳನ್ನು ಮಾಡುತ್ತಿದ್ದರು. ಕುಮಾರಸ್ವಾಮಿ ಮತ್ತು ಸುಮಲತಾ ನಂತರ ಎಂದಿಗೂ ಪರಸ್ಪರ ಭೇಟಿಯಾಗಿ ಮಾತುಕತೆಯಾಗಿರಲಿಲ್ಲ. ಆದರೆ ಈ ಬಾರಿ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವರುವುದರಿಂದ ಈ ಮಾತು ಕೇಳಿಬರುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.