ಮಂಡ್ಯ; ಕೊನೆಗೂ ಕೊ.ಲೆ ಹಿಂದಿನ ರಹಸ್ಯ ಬಯಲು, ಆರೋಪಿ ಬಿಚ್ಚಿಟ್ಟ ಸತ್ಯ ಏನು ಗೊ ತ್ತಾ

 | 
ರ್

ಅತಿ ಆದದ್ದು ಹಿತವನ್ನು ಹಾಳುಮಾಡುತ್ತದೆ ಎಂದು ನಮ್ಮ ಹಿರಿಯರು ಸುಮ್ಮನೆ ಹೇಳಿಲ್ಲ.ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ‌ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿ ದೀಪಿಕಾ ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು ಪ್ರಕರಣ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ಲ್ಯಾನ್​ ಮಾಡಿಯೇ ಶಿಕ್ಷಕಿಯನ್ನು ಕೊಲೆ ಮಾಡಿದ್ದು, ಕೊಲೆಗೂ ಮುನ್ನ ಆರೋಪಿ ಗುಂಡಿ ತೋಡಿರುವುದು ತಿಳಿದುಬಂದಿದೆ. ಇದೀಗ ಆರೋಪಿಯನ್ನು ಕೂಡ ಪೋಲಿಸರು ಬಂಧಿಸಿದ್ದಾರೆ.

ದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳ ನಿತೇಶ್ ಗ್ರಾಮದಲ್ಲೇ ಇದ್ದನು. ಯಾವಾಗ ದೀಪಿಕಾಳ ಶವ ಪತ್ತೆಯಾಯ್ತೋ ಅಂದಿನಿಂದ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್​ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ.

ಪ್ರಕರಣದ ದಿಕ್ಕು ತಪ್ಪಿಸಲು ನಾಟಕವಾಡ್ಡಿದ್ದ ಆರೋಪಿ ನಿತೇಶ್, ಕೊಲೆಯಾದ ಮಾರನೇ ದಿನ ದೀಪಿಕಾಳ ತಂದೆಗೆ ತಾನೇ ಕರೆ ಮಾಡಿದ್ದನು.  ಅಪ್ಪಾಜಿ ದೀಪಿಕಾ ಅಕ್ಕಾ ಸಿಕ್ಕಿದ್ರಾ ಎಂದು ವಿಚಾರಿಸಿದ್ದನು. ಆ ಮೂಲಕ ತನ್ನ ಮೇಲೆ ಅನುಮಾನ ಬಾರದಂತೆ ನಿತೇಶ್ ನಾಟಕವಾಡಿದ್ದನು. ಮೃತ ದೀಪಿಕಾಳನ್ನ ಅಕ್ಕ ಅಂತ ಕರೆದರೆ, ಆಕೆಯ ತಂದೆಯನ್ನ ಅಪ್ಪಾಜಿ ಎಂದು ನಿತೇಶ್ ಕರೆಯುತ್ತಿದೆ.

ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ನಿವಾಸಿಯಾಗಿದ್ದ ದೀಪಿಕಾ ಅವರು ಜನವರಿ 20 ರಂದು ಎಂದಿನಂತೆ ಶಾಲೆಗೆ ಹೋಗಿದ್ದರು. ಆದರೆ, ಮನೆಗೆ ವಾಪಸ್ ಆಗಿರಲಿಲ್ಲ. ಹೀಗಾಗಿ ತನ್ನ ಪತ್ನಿ ನಾಪತ್ತೆಯಾಗಿರುವುದಾಗಿ ಪತಿ ಲೋಕೇಶ್​​​ ದೂರು ನೀಡಿದ್ದರು.ಅಲ್ಲದೆ, ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ಆಕೆಯ ಡಿಯೋ ಸ್ಕೂಟರ್ ಪತ್ತೆಯಾಗಿತ್ತು. ಈ ಪ್ರದೇಶದ ಸುತ್ತಮುತ್ತ ತೀವ್ರ ಹುಡುಕಾಟ ನಡೆಸಿದಾಗ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. 

ನಾನು ಕರೆದಾಗ ಆಕೆ ಕೆಲವೊಮ್ಮೆ ಬರುತ್ತಿರಲಿಲ್ಲ. ಆದರೆ, ಆಕೆ ಕರೆದಾಗ ಮಾತ್ರ ನಾನು ತಪ್ಪದೇ ಹೋಗಬೇಕಿರುತ್ತಿತ್ತು. ಅದಕ್ಕಾಗಿ ನನಗೂ ಆಕೆಗೂ ಆಗಾಗ ಜಗಳವಾಗುತ್ತಿತ್ತು. ಹಾಗಾಗಿ, ಆಕೆಯ ಮೇಲೆ ನನಗೆ ಆಕೆಯ ಮೇಲೊಂದು ಸಿಟ್ಟಿತ್ತು. ಪದೇ ಪದೇ ಜಗಳವಾಗುತ್ತಲೇ ಇದ್ದಿದ್ದರಿಂದ ಆಕೆಯನ್ನು ಕೊಲ್ಲಲು ನಿರ್ಧರಿಸಿದ್ದೆ. ಹಾಗಾಗಿ, ಜನವರಿ 20ರಂದು ಆಕೆಯನ್ನು ಭೇಟಿ ಮಾಡಿ ಅಲ್ಲೇ ಕೊಲ್ಲಲು ನಿರ್ಧರಿಸಿ, ಯೋಗ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿಗೆ ಬರಲು ಹೇಳಿ ಅಲ್ಲಿ ಆಕೆಯ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದೆ. ಆನಂತರ ಮೊದಲೇ ತೋಡಿಟ್ಟಿದ್ದ ಗುಂಡಿಯಲ್ಲಿ ಆಕೆಯನ್ನು ಹಾಕಿ ಮುಚ್ಚಿದೆ ಎಂದು ಹೇಳಿದ್ದಾನೆಂದು ಮೂಲಗಳು ತಿಳಿಸಿವೆ.


( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.