ಎಲಿಮಿನೇಷನ್ ನಲ್ಲಿ ದೊಡ್ಡ ಮೋಸ, ಮನೆಯಿಂದ ಹೊರಬಂದ ಮಂಗಳೂರು ಅವಿನಾಶ್ ಶೆಟ್ಟಿ ಕ.ಣ್ಣೀರು

 | 
ಕ್

ಆನೆಯನ್ನ ಪಳಗಿಸೋಕೆ ಒಬ್ಬ ಮಾವುತ ಬೇಕು ಅಂತ ಆಡ್ ನೋಡ್ದೆ. ಹಾಗಾಗಿ ಬಂದೆ -ಇದು ಅಸ್ತಿಕ್ ಅವಿನಾಶ್‌ ಶೆಟ್ಟಿ ವೈಲ್ಡ್‌ ಕಾರ್ಡ್‌ ಮೂಲಕ ಈ ಸಲದ ಬಿಗ್‌ಬಾಸ್‌ ಮನೆಯೊಳಗೆ ಹೋದಾಗ ಆಡಿದ ಮಾತು.  ಹೌದು ಅವರ ಸ್ಟೈಲ್‌, ಕಾನ್ಫಿಡೆನ್ಸ್‌, ಮಾತು ಎಲ್ಲವೂ ಅವರು ಮನೆಯೊಳಗೆ ಮಿಂಚಲಿದ್ದಾರೆ ಎಂಬುದನ್ನು ದೃಢೀಕರಿಸುವ ಹಾಗೆಯೇ ಇತ್ತು. ಆದರೆ ಅವಿನಾಶ್ ಪ್ರೇಕ್ಷಕರ ನಿರೀಕ್ಷೆಯ ಮಟ್ಟಕ್ಕೆ ಮುಟ್ಟಲು ಸಾಧ್ಯವಾಗಿಲ್ಲ. 

ಹಾಗಾಗಿಯೇ ಈ ವಾರ ಅವರು ಮನೆಯಿಂದ ಹೊರಗೆ ಬಂದಿದ್ದಾರೆ. ಬ್ಯಾಕ್‌ ಟು ಬ್ಯಾಕ್‌ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಮನೆಯಿಂದ ಹೊರಗೆ ಬರುವುದರ ಮೂಲಕ, ಅರ್ಧದಲ್ಲಿ ಎಂಟ್ರಿ ಕೊಟ್ಟು ಮನೆಯೊಳಗೆ ಜಾಗ ಗಿಟ್ಟಿಸುವುದು ಸುಲಭದ ಮಾತಲ್ಲ ಎಂಬುದನ್ನು ಸಾಬೀತುಮಾಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ಅಸ್ತಿಕ್ ಅವಿನಾಶ್ ಶೆಟ್ಟಿ. ಈಗತಾನೆ ಬಿಗ್‌ಬಾಸ್ ಮನೆಯಿಂದ ಹೊರಗೆ ಬಂದಿದ್ದೀನಿ. ತುಂಬಾನೇ ಫೀಲಿಂಗ್ಸ್‌ ಇವೆ. 

ವೈಲ್ಡ್‌ಕಾರ್ಡ್‌ ಕಂಟೆಸ್ಟೆಂಟ್ ಆಗಿ ನಾಲ್ಕು ವಾರ ಇದ್ದೆ. ನನ್ನ ಬೆಸ್ಟ್ ಕೊಡಲು ಟ್ರೈ ಮಾಡಿದೆ. ಫಿನಾಲೆಯ ಸಮೀಪಕ್ಕೆ ಹೋಗಿ ಹೊರಗೆ ಬಂದಿದ್ದೀನಿ. ಹಾಗಾಗಿ ಸ್ವಲ್ಪ ದುಃಖ ಆಗ್ತಿದೆ. ನಾನು ನಿರೀಕ್ಷೆ ಮಾಡಿರಲಿಲ್ಲ. ಸೇವ್‌ ಆಗ್ತೀನಿ ಅಂತಾನೇ ಅಂದ್ಕೊಂಡಿದ್ದೆ. ಆದರೆ ಹಣೆಬರಹ ಏನೂ ಮಾಡಕ್ಕಾಗಲ್ಲ. ಜನ ಅವಿ ಅಣ್ಣಾ ನೀವು ಇನ್ನು ಇರಬೇಕಿತ್ತು ಎಂದು ಹೇಳುತ್ತಿದ್ದಾರೆ. ನನಗೆ ವರ್ತೂರ್ ಸಂತೋಷ್ ತುಂಬ ಜೆನ್ಯೂನ್‌ ಮನುಷ್ಯ ಅನಿಸುತ್ತದೆ. ವಿನಯ್ ಸ್ವಲ್ಪ ಫೇಕ್ ಮಾಡ್ತಿದ್ದಾರೆ ಅನಿಸುತ್ತಿದೆ. ತನಿಷಾ ಕೂಡ ಸ್ವಲ್ಪ ಫೇಕ್ ಮಾಡುತ್ತಿದ್ದಾರೆ. 

ವರ್ತೂರ್‍ ಸಂತೋಷ್ ಖಂಡಿತ ಅಂತಿಮ ಹಂತಕ್ಕೆ ಹೋಗುತ್ತಾರೆ. ಅವರ ಜೊತೆಗೆ ಪ್ರತಾಪ್ ಕೂಡ ಬರಬಹುದು. ಪ್ರತಾಪ್‌ ಅವರು ಅಲ್ಲಿನ ಸಂದರ್ಭವನ್ನು ಬಳಸಿಕೊಳ್ಳುವುದು ಹೇಗೆ ಎಂಬುದು ತುಂಬ ಚೆನ್ನಾಗಿ ಗೊತ್ತಿದೆ. ಸಂಗೀತಾ ಕೂಡ ಟಾಪ್‌ 5ನಲ್ಲಿ ಇರುತ್ತಾರೆ. ಅವರು ಜಾಸ್ತಿ ಮಾಡುತ್ತಾರೆ, ಆದರೂ ಅವರಿಗೆ ಟಾಸ್ಕ್‌ನಲ್ಲಿ ಕಮ್‌ಬ್ಯಾಕ್‌ ಮಾಡುವ ರೀತಿಯಿಂದಲೇ ಅವರು ಫೈನಲ್‌ಗೆ ಹೋಗುತ್ತಾರೆ ಅನಿಸುತ್ತದೆ. 

ಜೊತೆಗೆ ಕಾರ್ತೀಕ್ ಕೂಡ ತುಂಬ ಪ್ರಬಲ ಸ್ಪರ್ಧಿ. ತುಕಾಲಿ ಬಹಳ ಬುದ್ಧಿವಂತ. ಅಷ್ಟೇ ಸ್ವಯಂಕೇಂದ್ರಿತ ಮನುಷ್ಯ. ನನಗೆ ವೈಯಕ್ತಿಕವಾಗಿ ವರ್ತೂರ್ ಸಂತೋಷ್ ಗೆಲ್ಲಬೇಕು ಎಂಬ ಆಸೆ ಇದೆ. ಮುಂದಿನ ವಾರ ನನ್ನ ಜಾಗದಲ್ಲಿ ಸಿರಿ ಇರುತ್ತಾರೆ ಅನಿಸುತ್ತದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.