ರಾಜ್ಯದ ಜನ ಮನಗೆದ್ದ ಮನೋಹರ್ ಇ.ಹಲೋಕ; ಬೆ ಚ್ಚಿಬಿದ್ದ ಕನ್ನಡಿಗರು

 | 
Hshss

ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ಹಲವಾರು ಕಲಾವಿದರು ಇನ್ನಿಲ್ಲವಾಗಿದ್ದಾರೆ. ಇದೀಗ ಅವರ ಸಾಲಲ್ಲಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಕೂಡ  ಒಬ್ಬರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿಯೂ ಅವರು ಗುರುತಿಸಿಕೊಂಡಿದ್ದರು.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಸೃಜನಶೀಲ ಬರಹಗಾರರಾಗಿ, ಅನೇಕ ಕಥೆ, ಕವನಗಳನ್ನು ಬರೆದಿದ್ದು, ಬೊಗಾಣೆ (ಕೊಂಕಣಿ), ಸೀತಾನದಿ (ಕನ್ನಡ), ದಬಕ್‌ ದಬಕ್‌ ಐಸಾ (ತುಳು), ಐಸ್‌ಕ್ರೀಂ (ತುಳು) ಮುಂತಾದ ಚಿತ್ರಗಳಲ್ಲಿ ನಟಿಸುವ ಮೂಲಕ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದು ಉದಯವಾಣಿಯ ಮೂಲಕ ಪ್ರಕಟಿಸಿದ್ದಾರೆ.

ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದಾರೆ ಅವರು, ಕರ್ನಾಟಕ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ-ಪುರಸ್ಕಾರಗಳ ಪಾತ್ರ. ಹಲವರು ಜನರಿಗೆ ಮಾದರಿಯಾಗಿರುವ ಇವರು ಕಲಾ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.