ವರದಕ್ಷಿಣೆ ಕೊಡಲಿಲ್ಲ ಎಂದು ಸೊಸೆಗೆ HIV ಇಂಜೆಕ್ಷನ್ ಕೊಟ್ಟ ಅತ್ತೆ
Updated: Feb 18, 2025, 15:17 IST
|

ಅಷ್ಟಕ್ಕೂ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ ಸಂಬಂಧಿಸಿದ ಈ ಘಟನೆಯಲ್ಲಿ ದೂರು ದಾಖಲಿಸುವಂತೆ ಸಹರಾನ್ಪುರ ನ್ಯಾಯಾಲಯವು ಉತ್ತರ ಪ್ರದೇಶದ ಪೊಲೀಸರಿಗೆ ಆದೇಶಿಸಿದೆ.ಮದುವೆಯಾದ ತಕ್ಷಣ ಆಕೆಗೆ ಅತ್ತೆ-ಮಾವ ಕಿರುಕುಳ ನೀಡಲು ಆರಂಭಿಸಿದ್ದರು, ಮಗಳನ್ನು ಅವಮಾನಿಸಿದರು, ಮಗನಿಗೆ ಬೇರೆ ಮದುವೆ ಮಾಡುವುದಾಗಿ ಹೇಳಿದರು.
ಮಾರ್ಚ್ 25, 2023ರಂದು ಆಕೆಯನ್ನು ಮನೆಯಿಂದ ಹೊರಹಾಕಲಾಯಿತು. ಮೂರು ತಿಂಗಳುಗಳ ಕಾಲ ನಮ್ಮೊಂದಿಗೆ ಇದ್ದಳು, ನಂತರ ಹೇಗೋ ಮಾತನಾಡಿ ಆಕೆಯ ಗಂಡನ ಮನೆಗೆ ಕಳುಹಿಸಲಾಯಿತು. ಬಳಿಕ ಆಕೆಗೆ ದೈಹಿಕ ಹಾಗೂ ಮಾನಸಿಕವಾಗಿ ಚಿತ್ರಹಿಂಸೆ ನೀಡಲಾಯಿತು. 2024ರ ಮೇನಲ್ಲಿ ಆಕೆಯ ಅತ್ತೆ ಮಾವ ಬಲವಂತವಾಗಿ ಆಕೆಗೆ ಎಚ್‌ಐವಿ ಸೋಂಕಿತ ಸಿರಿಂಜ್ ಅನ್ನು ಚುಚ್ಚಿದ್ದರು. ಆಕೆಯ ಆರೋಗ್ಯ ಶೀಘ್ರವಾಗಿ ಹದಗೆಟ್ಟಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ಆಕೆ ಎಚ್‌ಐವಿ ಪಾಸಿಟಿವ್ ಆಗಿರುವುದು ತಿಳಿದುಬಂದಿತ್ತು. ಆದರೆ ಆಕೆಯ ಪತಿಗೆ ಎಚ್‌ಐವಿ-ನೆಗೆಟಿವ್ ಕಂಡುಬಂದಿದೆ.
ಇನ್ನು ಈ ಕುರಿತಾಗಿ ಸಂತ್ರಸ್ತೆಯ ತಂದೆ ಮಾತನಾಡಿ, 2023ರಲ್ಲಿ ತಮ್ಮ ಮಗಳ ಮದುವೆ ಮಾಡಿಕೊಟ್ಟಿದ್ದೆವು, ಮದುವೆಗೆ 45 ಲಕ್ಷ ರೂ. ಖರ್ಚು ಮಾಡಿದ್ದೆವು. ವರನ ಕುಟುಂಬಕ್ಕೆ 15 ಲಕ್ಷ ರೂ. ನಗದು ಹಾಗೂ ಸಬ್-ಕಾಂಪ್ಯಾಕ್ಟ್ ಎಸ್ಯುವಿ ನೀಡಿದ್ದೇವೆ, ಆದರೆ ಅವರು ಹೆಚ್ಚುವರಿಯಾಗಿ 10 ಲಕ್ಷ ರೂಪಾಯಿ ನಗದು ಮತ್ತು ದೊಡ್ಡ ಎಸ್ಯುವಿ ಕೇಳಿದ್ದಾರೆ ಆದಷ್ಟು ಬೇಗನೆ ಕೊಡುತ್ತೇನೆ ಎಂದಿದ್ದೆ ಎಂದು ಕಣ್ಣೀರು ಹಾಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025