'ಅಪ್ಪ ತುಂಬ ಒಳ್ಳೆಯವರು; ದ ರ್ಶನ್ ಮಗ ವಿನೀಶ್ ಕಣ್ಣೀ ರ ಮಾತು'

 | 
Gyu

ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಸದ್ಯ ಜೈಲಿನಲ್ಲಿದ್ದರೆ ಆತನ ಕುಟುಂಬ ಮಾತ್ರ ಅದರ ನೋವು ಅನುಭವಿಸುತ್ತಿದೆ. ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮಿ ಎಲ್ಲರನ್ನೂ ಅನ್‌ಫಾಲೋ ಮಾಡಿ, ಫೋಟೊ ಡಿಲೀಟ್ ಮಾಡಿದ್ದರು.

ಇನ್ನು ದರ್ಶನ್ ಪ್ರಕರಣದ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮೌನಕ್ಕೆ ಜಾರಿದ್ದರೆ. ಮಗ ವಿನೀಶ್ ತಂದೆಯ ಬಂಧನದ ಬಗ್ಗೆ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿರುವ ಅವರು, ತಂದೆಯನ್ನು ನಿಂದಿಸಿದವರಿಗೆ ಧನ್ಯವಾದ ಎಂದಿದ್ದಾರೆ.

ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದ. ನನಗೀಗ 15 ವರ್ಷ, ನನಗೂ ಮನಸ್ಸಿದೆ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲ ಬೇಕಾಗಿದೆ. ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ ಎಂದು ಇನ್‌ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ಒಂದು ಕಡೆ ದರ್ಶನ್ ಪೊಲೀಸರ ಅತಿಥಿಯಾಗಿದ್ದರೆ ಮತ್ತೊಂದು ಕಡೆ ಪತ್ನಿ ವಿಜಯಲಕ್ಷ್ಮಿ ಮತ್ತು ವಿನೀಶ್ ನೋವು ಅನುಭವಿಸುತ್ತಿದ್ದಾರೆ. ವಿನೀಶ್ ಇನ್‌ಸ್ಟಾ ಸ್ಟೋರಿ ಸದ್ಯ ಭಾರಿ ವೈರಲ್ ಆಗುತ್ತಿದ್ದು, ದರ್ಶನ್ ಅಭಿಮಾನಿಗಳು ವಿನೀಶ್‌ಗೆ ಧೈರ್ಯ ತುಂಬಲು ಪ್ರಯತ್ನಿಸುತ್ತಿದ್ದಾರೆ. 

ದರ್ಶನ್ ಬಂಧನ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಇಂದು ಪೊಲೀಸರಿಗೆ ಶರಣಾಗಿದ್ದಾನೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದ ಚಾಲಕ ಚಿತ್ರದುರ್ಗ ಪೊಲೀಸರ ಮುಂದೆ ಶರಣಾಗಿದ್ದು, ಕೊಲೆ ಬಗ್ಗೆ ಮತ್ತಷ್ಟು ಮಾಹಿತಿ ಹಂಚಿಕೊಂಡಿದ್ದಾನೆ ಎನ್ನಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.