ನನ್ನ ವಿಡಿಯೋ ತಂದೆ ಅತ್ರ ಇದೆ ಅಂತೆ; ಅಪ್ಪನ Blackmailಗೆ ನಿಶಾ ಯೋಗೇಶ್ವರ್ ತಬ್ಬಿಬ್ಬು
Oct 28, 2024, 07:29 IST
|
ಸೈನಿಕ ಚಿತ್ರದ ನಟ ಯೋಗೀಶ್ವರ್ ಅವ್ರು ಸಿನಿಮಾ ರಂಗದಲ್ಲಿ ಮಿಂಚಿದ್ದಕಿಂತ ಹೆಚ್ಚು ರಾಜಕೀಯದಲ್ಲಿ ಕಾಣಿಸಿ ಕೊಂಡಿದ್ದೇ ಹೆಚ್ಚು.ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರಿದೆ. ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಸಿ.ಪಿ. ಯೋಗೇಶ್ವರ್ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಮೂರು ಪಕ್ಷಗಳಿಗೆ ಇದು ಪ್ರತಿಷ್ಟೆಯ ಕಣವಾಗಿದ್ದು ಭಾರಿ ಕುತೂಹಲ ಕೆರಳಿಸಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮಗಳಾದ ನಿಶಾ ಯೋಗೇಶ್ವರ್ ತಮ್ಮ ತಂದೆಯ ವಿರುದ್ಧವೇ ತಿರುಗಿಬಿದ್ದಿದ್ದಾರೆ.
ಸಿಪಿ ಯೋಗೇಶ್ವರ್ ಮತ್ತು ಮಗಳು ನಿಶಾ ಯೋಗೇಶ್ವರ್ ನಡುವೆ ವೈಮನಸ್ಸು ಮೂಡಿದೆ. ತನ್ನ ಬೆಳವಣಿಗೆಗೆ ತಂದೆಯೇ ಅಡ್ಡಿಯಾಗಿದ್ದಾರೆ ಎಂದು ನಿಶಾ ಯೋಗೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಕೀಯಕ್ಕೆ ಬರದಂತೆ ತಡೆದರು, ಸಮಾಜ ಸೇವೆ ಮಾಡಲು ಕೂಡ ಅಡ್ಡಿಯಾದರು, ವಿದ್ಯಾಭ್ಯಾಸ ಮಾಡಲು ಅಡ್ಡಿಯಾಗಿದ್ದರು ಎಂದು ತಂದೆಯ ವಿರುದ್ಧವೇ ಆರೋಪಿಸಿದ್ದಾರೆ. ಯಾವ ಕ್ಷೇತ್ರದಲ್ಲೂ ನನ್ನನ್ನು ಬೆಳೆಯಲು ಬಿಡುತ್ತಿಲ್ಲ, ಈಗ ನೆಮ್ಮದಿಯಾಗಿ ಇರಲು ಆಗುತ್ತಿಲ್ಲ, ಎಲ್ಲಾ ಸತ್ಯಗಳನ್ನು ಹೊರತರುತ್ತೇನೆ ಎಂದು ಹೇಳಿದ್ದಾರೆ.
ವಿಡಿಯೋ ಹೇಳಿಕೆಯನ್ನು ಫೇಸ್ಬುಕ್ನಲ್ಲಿ ಬಿಡುಗಡೆ ಮಾಡಿರುವ ನಿಶಾ ಯೋಗೇಶ್ವರ್, ನಮ್ಮ ಕುಟುಂಬದ ಗುಟ್ಟನ್ನು ರಟ್ಟು ಮಾಡುತ್ತೇನೆ. ನನ್ನ ತಂದೆಯಿಂದ ನಾನು ಸಾಕಷ್ಟು ಅವಮಾನ ಅನುಭವಿಸಿದ್ದೇನೆ. ನಾನು 13 ವರ್ಷದವಳಿದ್ದಾಗ ನನ್ನ ತಂದೆ ಬೇರೊಂದು ಸಂಸಾರವನ್ನು ಕಟ್ಟಿಕೊಂಡಿದ್ದನ್ನು ಪತ್ರಿಕೆಗಳ ಮೂಲಕ ತಿಳಿದುಕೊಂಡೆ. ನನಗೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.