IIT ಬಾಬಾ ಬುರುಡೆ ಬಿಟ್ರಾ, ಇಂಡಿಯಾ ಗೆದ್ದ ಬಳಿಕ ಹೆಚ್ಚಾಯಿತು ನಾಗ ಸಾಧು ಭವಿಷ್ಯ ವಾಣಿ ವಿಚಾರ
Feb 25, 2025, 16:05 IST
|

ಪಾಕಿಸ್ತಾನವನ್ನು ಅರು ವಿಕೆಟ್‌ಗಳಿಂದ ಟೀಂ ಇಂಡಿಯಾ ಬಗ್ಗುಬಡಿಯುವುದರ ಜತೆಗೆ ಐಐಟಿ ಬಾಬಾ ಭವಿಷ್ಯವನ್ನು ಸುಳ್ಳು ಮಾಡಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಈ ಐಐಟಿ ಬಾಬಾನನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ.ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆಯೋಜನೆಯಾಗಿದ್ದ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು.
ಆದರೆ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ ರೋಹಿತ್ ಶರ್ಮಾ ಪಡೆ ಏಕಪಕ್ಷೀಯವಾಗಿ ಪಂದ್ಯವನ್ನು ಜಯಿಸುವ ಮೂಲಕ ಸೆಮೀಸ್ ಹಾದಿಯನ್ನು ಸುಗಮ ಮಾಡಿಕೊಂಡಿತು. ಇದರ ಜತೆಗೆ ಐಐಟಿ ಬಾಬಾನ ಭವಿಷ್ಯದಲ್ಲಿ ಎಳ್ಳಷ್ಟು ಹುರುಳಿಲ್ಲ ಎಂದು ಸಾಬೀತು ಮಾಡಿದೆ.
ಅಭಯ್ ಸಿಂಗ್ ಅಥವಾ ಈ ಐಐಟಿ ಬಾಬಾ, ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಖಾಸಗಿ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಪಂದ್ಯದ ಕುರಿತಂತೆ ತುಂಬಾ ಆತ್ಮವಿಶ್ವಾಸದಿಂದಲೇ ಭವಿಷ್ಯ ನುಡಿದಿದ್ದರು. ಭಾರತ ತಂಡವು ಪಾಕಿಸ್ತಾನ ಎದುರು ಹೀನಾಯ ಸೋಲು ಅನುಭವಿಸಲಿದೆ.
ಈ ಹೈವೋಲ್ಟೇಜ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೂಡಾ ವೈಫಲ್ಯ ಅನುಭವಿಸಲಿದ್ದಾರೆ ಎಂದು ಐಐಟಿ ಬಾಬಾ ಭವಿಷ್ಯ ನುಡಿದಿದ್ದರು. ಇದೀಗ ಉಲ್ಟಾ ಹೊಡೆದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025