ಸೂಲಿಬೆಲೆ ಭಾಷಣಕ್ಕೆ ಕೊರಗಜ್ಜ ದೈವ ಕೆಂಡ, ವಿಪರೀತ ಬುದ್ಧಿ ವಿನಾಶ ಕಾಲೇ ಎಂದ ನೆಟ್ಟಿಗರು

 | 
Bd
ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀಯಪ್ಪ.. ಬೇರೆ ಧರ್ಮದ ಹುಡುಗಿಯರನ್ನೂ ನೋಡು. ಮಂಗಳೂರಲ್ಲಿ ಕಿಚ್ಚು ಹಚ್ಚಿದ ಸೂಲಿಬೆಲೆ ಭಾಷಣ ಅನ್ಯಧರ್ಮದ ಯುವತಿಯರನ್ನು ಪ್ರೀತಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ಕೊಟ್ಟಿದ್ದಾರೆ.ಮಂಗಳೂರಿನ ಕುತ್ತಾರು ಕೊರಗಜ್ಜನ ಸನ್ನಿಧಾನದಲ್ಲಿ ನಡೆದ ಪಾದಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತಾಂತರ ಎಂದು ಬಡಿದಾಡಿದ್ದು ಸಾಕು. 
ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದು ತಿಳಿಸಿದ್ದಾರೆ.ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ ಎಂದು ಹೇಳಿದ್ದಾರೆ.
ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ ಎಂದಿದ್ದಾರೆ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದಾರೆ.
ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದರು. ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಭಾರೀ ವಿರೋಧಗಳು ವ್ಯಕ್ತವಾಗಿತ್ತು. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ಜೋರಾಗಿತ್ತು. ಇನ್ನು ಕೊರಗಜ್ಜ ಎಲ್ಲಾ ಧರ್ಮದ ಜನರಿಗೂ ದೇವರು. ಆ ಕ್ಷೇತ್ರದಲ್ಲಿ ಹೇಳಿರುವುದು ನಿಜಕ್ಕೂ ಶಾಕಿಂಗ್ ಆಗಿದೆ. ಅವರಿಗೆ ಕೊರಗಜ್ಜನೆ ನೋಡಿ ಕೊಳ್ಳುತ್ತಾನೆ ಎಂದಿದ್ದಾರೆ ಊರಿನ ಜನ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub