ನಿಖಿಲ್ ರಾಜಕೀಯದಿಂದ ವಿಸರ್ಜನೆ; ಸುಮಲತಾ ಕೈತಪ್ಪಿದ ಮಂಡ್ಯ ಟಿಕೆಟ್

 | 
ಹಹಗ

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಬಾಕಿ ಇರುವ 8 ಕ್ಷೇತ್ರಗಳಲ್ಲಿ 3 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಿದ್ದು, ಇನ್ನು 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಬೇಕಿದೆ.

ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದು, ಸುಮಲತಾ ಅವರ ಟೆನ್ಷನ್ ಹೆಚ್ಚಿಸಿದ್ದಾರೆ. ಮಂಡ್ಯ ಹಾಲಿ ಸಂಸದೆ ಸುಮಲತಾ ಈ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ವಿಶ್ವಾಸ ಹೊಂದಿದ್ದರು. ಇನ್ನೂ ಬಿಜೆಪಿ ಸೇರಿಲ್ಲವಾದರೂ, ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಆದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಸುಮಲತಾ ಅವರಿಗೆ ದೊಡ್ಡ ತಲೆನೋವಾಯಿತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು. ಸುಮಲತಾ 7,03,660 ಮತಗಳನ್ನು ಪಡೆದರೆ, ನಿಖಿಲ್ 5,77,784 ಮತ ಪಡೆದುಕೊಂಡಿದ್ದರು. 1,25,876 ಮತಗಳ ಅಂತರದಿಂದ ಗೆದ್ದಿದ್ದ ಸುಮಲತಾ, ಬಳಿಕ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು.

ಸುಮಲತಾ ಅವರಿಗೆ ಮಂಡ್ಯದಿಂದ ಟಿಕೆಟ್ ಸಿಗದೇ ಇದ್ದರೂ ಬೆಂಗಳೂರು ಉತ್ತರ ಅಥವಾ ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎನ್ನುವ ವದಂತಿಗಳು ಇತ್ತು. ಆದರೆ ಈಗ ಈ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಸುಮಲತಾ ಅವರಿಗೆ ಅವಕಾಶ ಟಿಕೆಟ್ ಸಿಗಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ. ಇನ್ನು ದೇವೇಗೌಡರ ಅಳಿಯ ಡಾ ಮಂಜುನಾಥ್ ಅವರು ಕೂಡ ಬಿಜೆಪಿಗೆ ಸೇರ್ಪಡೆ ಆಗಿರುವುದು ಸುಮಲತಾ ಚಿಂತೆಗೀಡು ಮಾಡಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.